Advertisement
ಮಂಗಳೂರಿನ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾಯ್ದೆ ಬಗ್ಗೆ ತಪ್ಪು ತಿಳಿವಳಿಕೆ ಹೊಂದಿರುವ ಕಾರಣಕ್ಕೆ ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ನಡೆಯುತ್ತಿದೆ. ಈ ಕಾಯ್ದೆಯನ್ನು ಅನುಷ್ಠಾನಗೊಳಿಸದಂತೆ ತಡೆಯುವುದೇ ವಿಪಕ್ಷಗಳ ಉದ್ದೇಶವಾಗಿದೆ ಎಂದು ಟೀಕಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಶಾಸಕ ಯು.ಟಿ. ಖಾದರ್ ಅಡ್ಡ ಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದಾರೆ ಎಂದು ಜಿತೇಂದ್ರ ಕೊಟ್ಟಾರಿ ಟೀಕಿಸಿದರು. ಖಾದರ್ ಒಂದು ಕಡೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದರೆ, ಇನ್ನೊಂದೆಡೆ ಈ ಕಾಯ್ದೆಯ ಹಿಂದೆ ಬಿಜೆಪಿಯ ಹಿಡನ್ ಅಜೆಂಡಾ ಇದೆ, ಇದು ಸಂವಿಧಾನಬಾಹಿರ ಎಂದೆಲ್ಲ ಗೊಂದಲದ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ ಅವರು, ಬಿಜೆಪಿಯ ಹಿಡನ್ ಅಜೆಂಡಾ ಏನೆಂಬುದನ್ನು ಖಾದರ್ ತಿಳಿಯಪಡಿಸಬೇಕೆಂದು ಆಗ್ರಹಿಸಿದರು.
Related Articles
Advertisement
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ನಿತಿನ್ ಕುಮಾರ್, ಸತೀಶ್ ಪ್ರಭು, ಸಂದೇಶ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಶಾಸಕ ಖಾದರ್ ವಿರುದ್ಧ ದೂರುಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದರೆ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಬಹಿರಂಗವಾಗಿ ಶಾಸಕ ಯು.ಟಿ.ಖಾದರ್ ನೀಡಿರುವ ಹೇಳಿಕೆ ವಿರುದ್ಧ ದ.ಕ. ಬಿಜೆಪಿ ಯುವ ಮೋರ್ಚಾ ಘಟಕವು ನಗರದ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದೆ. ದಾಖಲೆ ಸಮೇತ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಾಂತಿ ಕದಡುವ ರೀತಿಯ ಹೇಳಿಕೆ ನೀಡಿರುವ ಖಾದರ್ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಲಾಗಿದೆ ಎಂದು ಯುವ ಮೋರ್ಚಾ ಮುಖಂಡ ಸಂದೇಶ್ ಶೆಟ್ಟಿ ತಿಳಿಸಿದ್ದಾರೆ.