Advertisement

ಪೌರತ್ವ ತಿದ್ದುಪಡಿ ಮಸೂದೆ; ವಿಪಕ್ಷಗಳು ಪಾಕ್ ಭಾಷೆಯಲ್ಲಿ ಮಾತನಾಡುತ್ತಿವೆ: ಪ್ರಧಾನಿ ಮೋದಿ

10:00 AM Dec 12, 2019 | Nagendra Trasi |

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯ ವಿಚಾರದಲ್ಲಿ ವಿಪಕ್ಷಗಳು ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಆರೋಪಿಸಿದ್ದು, ಈ ಮಸೂದೆ ಇತಿಹಾಸದಲ್ಲಿ ಬಂಗಾರದ ಬರಹವಾಗಲಿದೆ ಎಂದು ಪ್ರತಿಪಾದಿಸಿದರು.

Advertisement

ಭಾರತೀಯ ಜನತಾ ಪಕ್ಷದ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 370ನೇ ವಿಧಿಯನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದಂತೆಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಿದ್ದೇವೆ. ಇದರಿಂದ ನೆರೆಯ ದೇಶಗಳಿಂದ ಭಾರತಕ್ಕೆ ವಲಸಿಗರಾಗಿ ಬರಲಿರುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಕಾಯಂ ಪೌರತ್ವ ನೀಡಲಿದೆ ಎಂದರು.

ಅಲ್ಲದೇ ಮುಂಬರುವ ಕೇಂದ್ರ ಬಜೆಟ್ ಮಂಡನೆಯ ಹಿನ್ನೆಲೆಯಲ್ಲಿ ರೈತರು, ಬಡವರ ಹಾಗೂ ಕೈಗಾರಿಕೋದ್ಯಮಿಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗದವರ ಸಲಹೆಯನ್ನು ಸಂಗ್ರಹಿಸಿ ವಿತ್ತ ಸಚಿವರ ಜತೆ ಹಂಚಿಕೊಳ್ಳುವಂತೆ ಸಂಸದರಲ್ಲಿ ಪ್ರಧಾನಿ ಮೋದಿ ಮನವಿ ಮಾಡಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next