Advertisement

CM ಟಾರ್ಗೆಟ್‌ ಮಾಡಲು ಪ್ರಾಧಿಕಾರಕ್ಕೆ ವಿರೋಧ: ಲಕ್ಷ್ಮಣ್‌

08:51 PM Aug 16, 2024 | Team Udayavani |

ಮೈಸೂರು: ಚಾಮುಂಡಿಬೆಟ್ಟದಲ್ಲಿನ ಚಾಮುಂಡೇಶ್ವರಿ ದೇಗುಲ ಮುಜರಾಯಿ, ಚಾಮುಂಡಿಬೆಟ್ಟ ಅರಣ್ಯ ಇಲಾಖೆ, ಗ್ರಾಪಂ, ಪ್ರವಾಸೋದ್ಯಮ ಇಲಾಖೆಗಳ ವ್ಯಾಪ್ತಿಗೆ ಒಳಪಟ್ಟಿದೆ.

Advertisement

ಕೇಂದ್ರ ಸರಕಾರದ ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಒಟ್ಟು 45.7 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡಲು ಚಾಮುಂಡಿಬೆಟ್ಟ ಪ್ರಾಧಿಕಾರ ರಚನೆಗೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಸ್ವಾಗತಿಸಿದ್ದವರು ಈಗ ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಕ್ಷೇಪಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ, ಜೆಡಿಎಸ್‌ ನಾಯಕರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ದೂರಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next