Advertisement

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

10:52 PM Sep 18, 2024 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಭಯದಿಂದಾಗಿ ಕಾಂಗ್ರೆಸ್‌ ಒಂದು ದೇಶ, ಒಂದು ಚುನಾವಣೆ ಪ್ರಸ್ತಾವವನ್ನು ವಿರೋಧಿಸುತ್ತಿದೆ. ನಾನು ಕೇಂದ್ರ ಸರಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ.

Advertisement

ಪತ್ರಕರ್ತರ ಜತೆ ಅವರು ಮಾತನಾಡಿ, ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿ¨ªಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಮೋದಿಯವರ ಭಯವಿದೆ. ಈ ಕ್ರಮದಿಂದಾಗಿ ಪ್ರಧಾನಿ ಮತ್ತು ಮುಖ್ಯಮಂತ್ರಿಗೆ ಐದು ವರ್ಷಗಳ ಸಂಪೂರ್ಣ ಅವಧಿ ದೊರೆಯುತ್ತದೆ. ಆ ದೃಷ್ಟಿಯಿಂದ ಇದು ಉತ್ತಮ ಕ್ರಮ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next