Advertisement

ಮರಾಠ ಪ್ರಾಧಿಕಾರ ಸ್ಥಾಪನೆಗೆ ವಿರೋಧ

06:59 PM Nov 18, 2020 | Suhan S |

ಚಿತ್ರದುರ್ಗ: ರಾಜ್ಯದಲ್ಲಿರುವ ಮರಾಠಿಗರನ್ನು ಓಲೈಸುವುದಕ್ಕಾಗಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

Advertisement

ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಿ 50 ಕೋಟಿ ರೂ.ಗಳ ಅನುದಾನಕ್ಕೆರಾಜ್ಯ ಸರ್ಕಾರ ಆದೇಶಿಸಿರುವುದು ನ್ಯಾಯ ಸಮ್ಮತವಲ್ಲ. ಇದು ಕರ್ನಾಟಕದಲ್ಲಿ ಕನ್ನಡಿಗರಿಗೆ ಮಾಡಿರುವ ಅವಮಾನ. ಇದರಿಂದ ಅನ್ಯ ಭಾಷಿಕರು ಕರ್ನಾಟಕದಲ್ಲಿ ಕನ್ನಡಿಗರಿಗೆ ಸಿಗಬೇಕಾದ ಸವಲತ್ತುಗಳನ್ನುಕಬಳಿಸಿದಂತಾಗುತ್ತದೆ. ನಮ್ಮ ರಾಜ್ಯದಲ್ಲಿ ಮರಾಠಿಗರಲ್ಲದೆ ಬೇರೆ ಬೇರೆ ರಾಜ್ಯಗಳ ಜನ ವಾಸಿಸುತ್ತಿದ್ದಾರೆ. ಅದಕ್ಕಾಗಿ ಅನ್ಯ ಭಾಷಿಕರಿಗೆ ಮಣೆ ಹಾಕುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಬಾರದು. ಕೂಡಲೆ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಪಡಿಸಬೇಕು. ಇಲ್ಲವಾದಲ್ಲಿ ನಾಡಿನಾದ್ಯಂತ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಐವತ್ತು ಕೋಟಿ ರೂ.ಅನುದಾನವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದು ಅತಿವೃಷ್ಟಿಯಿಂದ ನೊಂದಿರುವ ರೈತರಿಗೆ, ದೇಶದ ಗಡಿ ಕಾಯುವ ಸೆ„ನಿಕರಿಗೆ, ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ರೈತರಿಗೆ ನೀಡಲಿ. ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಕಡೆಗಣಿಸುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಅಗತ್ಯವಾದರೂ ಏನಿತ್ತುಎಂದು ಪ್ರಶ್ನಿಸಿದ ಕರವೆ ಕಾರ್ಯಕರ್ತರು, ಕನ್ನಡದ ಬಗ್ಗೆ ನಿಜವಾಗಿಯೂ ಗೌರವವಿದ್ದರೆ ರಾಜ್ಯ ಸರ್ಕಾರ ತಕ್ಷಣವೇ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಆರ್‌. ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಕೆ.ಜಿ.ಗೋವಿಂದರಾಜು, ಕಾರ್ಯಾಧ್ಯಕ್ಷ ಎಚ್‌.ಕೃಷ್ಣಮೂರ್ತಿ, ಉಪಾಧ್ಯಕ್ಷ ಟಿ.ಹನುಮಂತಪ್ಪ, ಜಿಲ್ಲಾ ಸಂಚಾಲಕ ಜಯಣ್ಣ, ಚಿತ್ರದುರ್ಗ ತಾಲೂಕು ಅಧ್ಯಕ್ಷ ಎಚ್‌ .ತಿಪ್ಪೇಸ್ವಾಮಿ, ಹೊಸದುರ್ಗ ತಾಲೂಕು ಅಧ್ಯಕ್ಷಎಚ್‌.ಎಂ.ಮಂಜುನಾಥ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಜೆ.ಓಬಳೇಶನಾಯಕ, ಕೆ.ಎಚ್‌.ತಿಪ್ಪೇಸ್ವಾಮಿ, ಎಂ.ಎಸ್‌.ಗಿರೀಶ್‌, ಕಾನೂನು ಸಲಹೆಗಾರ ಎಸ್‌.ಸಿ.ರಾಜಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next