ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ್ದ ಬಿಜೆಪಿಯನ್ನು ಹೊರಗಿಟ್ಟು ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿರುವ ಕ್ರಮ ಸರಿಯಿಲ್ಲ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಈ ಕುರಿತು ಸವದತ್ತಿ ತಾಲೂಕಿನ ಮುನಹಳ್ಳಿಯ ನಿವಾಸಿ, ವಕೀಲರೂ ಆಗಿರುವ ನಾಮದೇವ್ ಎಂಬುವರು ಪಿಐಎಲ್ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಬೇಕು ಎಂಬುದು ಜನಾಭಿಪ್ರಾಯವಾಗಿತ್ತು. ಹೀಗಾಗಿ, ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.