ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ. ಗೋಪಾಲಯ್ಯ ಅವರು ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬಿಜೆಪಿ ಸೇರದೆ ಸಚಿವ ಸ್ಥಾನಕ್ಕಾಗಿ ಪಕ್ಷ ಸೇರುತ್ತಿದ್ದು, ಯಾವುದೇ ಕಾರಣಕ್ಕೂ ಗೊಪಾಲಯ್ಯ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಮಾಜಿ ಉಪಮೇಯರ್ ಎಸ್.ಹರೀಶ್ ನೇತೃತ್ವದಲ್ಲಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ
ಯೂರಪ್ಪ ಅವರನ್ನು ಗುರುವಾರ ಭೇಟಿಯಾಗಿ ಈ ಸಂಬಂಧ ಮನವಿ ಸಲ್ಲಿಸಿದರು.
ಹಿಂದಿನ ಹಲವು ಚುನಾವಣೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸ್ವತಃ ಹಲ್ಲೆ ನಡೆಸಿರುವ ಗೋಪಾಲಯ್ಯ ಅವರು 1996ರಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿ ಸಿರುವ ಆರೋಪ ಹೊತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದಟಛಿ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿರುವ ಅವರು ಸ್ವತಃ ಅಪರಾಧ ಹಿನ್ನೆಲೆ ಯುಳ್ಳವರಾಗಿದ್ದಾರೆ. ಇಂತಹ ವ್ಯಕ್ತಿಯನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಪಕ್ಷದ ಸಿದಾಟಛಿಂತಕ್ಕೆ ಬೆಲೆ ಇಲ್ಲದಂತಾಗುತ್ತದೆ ಎಂದು ಪದಾಧಿಕಾರಿಗಳು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.