Advertisement

ರಾಜ್ಯಪಾಲರ ನಡೆಗೆ ಆಕ್ಷೇಪ; ಯುವ ಕಾಂಗ್ರೆಸ್‌ ಪ್ರತಿಭಟನೆ

02:47 PM May 18, 2018 | Team Udayavani |

ದಾವಣಗೆರೆ: ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ ರಾಜ್ಯಪಾಲ ವಜುಭಾಯ್‌ ವಾಲಾ ಅವರ ನಿರ್ಧಾರ ಖಂಡಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ಪ್ರತಿಭಟಿಸಿದ್ದಾರೆ. ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ನರೇಂದ್ರ ಮೋದಿ ಹಾಗೂ ಬಿ.ಎಸ್‌. ಯಡಿಯೂರಪ್ಪರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಪ್ರತಿಭಟನಾನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಸೈಯದ್‌ ಖಾಲೀದ್‌ ಅಹ್ಮದ್‌, ಈ ಹಿಂದೆ 2017ರಲ್ಲಿ ಗೋವಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆದಾಗ ಅತಿ ದೊಡ್ಡ ಪಕ್ಷವಾಗಿ
ಕಾಂಗ್ರೆಸ್‌ ಹೊರಹೊಮ್ಮಿತ್ತು. ಅಲ್ಲಿ ಸರ್ಕಾರ ರಚಿಸಲು ರಾಜ್ಯಪಾಲರು ಕಾಂಗ್ರೆಸ್‌ಗೆ ಆಹ್ವಾನ ನೀಡಿರಲಿಲ್ಲ. ಆದರೆ,
ಈಗ ಕರ್ನಾಟಕದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಹೊಂದಿದ್ದರೂ ಬಹುಮತ ಇಲ್ಲ. ಆದರೂ ಸಹ ರಾಜ್ಯಪಾಲರು ಅದೇ ಪಕ್ಷಕ್ಕೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಎಂದು ದೂರಿದರು.

ಪ್ರಜಾಪ್ರಭುತ್ವದ ಪಾಲಿಗೆ ಇದೊಂದು ಕರಾಳ ದಿನ. ಸಂವಿಧಾನ ವಿರೋಧಿ ನಿಲುವು ತಾಳಿರುವ ರಾಜ್ಯಪಾಲ ವಜುಭಾಯ್‌ ವಾಲಾ ಓರ್ವ ಬಿಜೆಪಿಯ ಪ್ರತಿನಿಧಿಯಂತೆ ವರ್ತಿಸಿದ್ದಾರೆ. ರಾಜ್ಯಪಾಲರ ಕಚೇರಿಯನ್ನು ಬಿಜೆಪಿ
ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಘಟಕದ ಜಿಲ್ಲಾ ವಕ್ತಾರ
ಮೈನುದೀªನ್‌, ಜಿಲ್ಲಾ ಕಾರ್ಯದರ್ಶಿ ಖಾಲೀದ್‌ ಪೈಲ್ವಾನ್‌, ಕಬೀರ್‌, ಜಮೀರ್‌, ಸಾಗರ್‌, ಸಂದೀಪ್‌, ಜಮೀರಾ
ನವೀದ್‌, ವಿನಯ್‌, ಮೊಹವದ್‌ ಸಾಧಿಕ್‌, ನವೀದ್‌ ಬಾಷಾ, ಸುಭಾನ್‌ ಸಾಬ್‌, ಅಬು ಸಾಲೇಹ, ಸಾಧಿಕ್‌, ಎನ್‌ಎಸ್‌
ಯುಐನ ಅಲಿ ರಹಮಾನ್‌, ಕೆ.ಎಚ್‌. ಇಮ್ರಾನ್‌ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಪ್ರಜಾಪ್ರಭುತ್ವದ ಕಗ್ಗೊಲೆ
ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯದ ಬಿಜೆಪಿ ಸರ್ಕಾರ ಅಧಿ ಕಾರಕ್ಕೆ
ಬರಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕುಮ್ಮಕ್ಕು ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆಂದು ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್‌ ತೀವ್ರವಾಗಿ ದೂರಿದ್ದಾರೆ. ನರೇಂದ್ರ ಮೋದಿಯವರ ಆಣತಿಯಂತೆ ರಾಜ್ಯಪಾಲ ವಾಜುಭಾಯ್‌ ವಾಲಾ ನಡೆದುಕೊಂಡಿದ್ದು, ರಾಜಭವನ ಬಿಜೆಪಿ ಕಚೇರಿಯಾಗಿದೆ. ಮುಖ್ಯಮಂತ್ರಿ ಸ್ಥಾನವನ್ನು ಅನೈತಿಕ, ಅಕ್ರಮವಾಗಿ ಅಲಂಕರಿಸಿರುವ ಬಿ.ಎಸ್‌. ಯಡಿಯೂರಪ್ಪ ನವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವೇ ಇಲ್ಲವೆಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next