Advertisement

ಹೆಚ್ಚಿನ ಶುಲ್ಕ ಸಂಗ್ರಹಕ್ಕೆ ವಿರೋಧ

02:47 PM Jul 06, 2018 | |

ವಿಜಯಪುರ: ನಗರದಲ್ಲಿರುವ ಸರಕಾರಿ ಐಟಿಐ ಕಾಲೇಜಿನಲ್ಲಿ ಪ್ರಚಾರ್ಯರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅನುತ್ತೀರ್ಣ ಮಾಡುವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಲಾಗುತ್ತಿರುವ ಪ್ರಾಚಾರ್ಯರ ಅಮಾನತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

Advertisement

ಗುರುವಾರ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದ
ವಿದ್ಯಾರ್ಥಿಗಳು, ಪ್ರಾಚಾರ್ಯರ ವಿರುದ್ಧ ಧಿಕ್ಕಾರ ಕೂಗಿದರು. ಪ್ರಾಚಾರ್ಯರು ಪರೀಕ್ಷೆಯಲ್ಲಿ ಉತ್ತೀರ್ಣ ಮಾಡುವ ಭರವಸೆ ನೀಡಿ ಒತ್ತಾಯದಿಂದ ಪ್ರತಿ ವಿದ್ಯಾರ್ಥಿಗಳಿಂದ 1500 ಪಡೆದಿದ್ದಾರೆ. ಹಣ ನೀಡದ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಮತ್ತೂಂದೆಡೆ ಇಡೀ ಕಾಲೇಜು ಅವ್ಯವಸ್ಥೆ ಆಗರವಾಗಿದೆ. 

ಕಾಲೇಜಿನಲ್ಲಿ ಮೂಲ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಪ್ರಾಚಾರ್ಯರನ್ನು
ಅಮಾನತುಗೊಳಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ, ಪ್ರಾಚಾರ್ಯರು
ವಿದ್ಯಾರ್ಥಿಗಳಿಗೆ ಬೆದರಿಕೆಯೊಡ್ಡಿ ಪ್ರತಿ ವಿದ್ಯಾರ್ಥಿಯಿಂದ 1500 ರೂ. ಸುಲಿಗೆ ಮಾಡುತ್ತಿದ್ದಾರೆ. ಕಾಲೇಜಿನಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಸುಮಾರು 9 ಲಕ್ಷ ರೂ. ಅಕ್ರಮ ಹಣ ಪಡೆದಿದ್ದಾರೆ. ವಿದ್ಯಾರ್ಥಿಗಳಿಂದ ಪರೀಕ್ಷೆಗಳಲ್ಲಿ ಪ್ರತಿಯೊಬ್ಬರಿಂದ 3 ಸಾವಿರ ರೂ. ನೀಡಲು ಬಲವಂತದ ಬೇಡಿಕೆ ಇಟ್ಟಿದ್ದಾರೆ. 

ಹೀಗಾಗಿ ಪ್ರಾಚಾರ್ಯರ ಭ್ರಷ್ಟಾಚಾರದ ವಿರುದ್ಧ ಉನ್ನತಮಟ್ಟದ ತನಿಖೆ ಆಗಬೇಕು. ಅಲ್ಲಿಯವರೆಗೆ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ನಗರ ಕಾರ್ಯದರ್ಶಿ ಸಚಿನ ಬಾಗೇವಾಡಿ, ಬಸವರಾಜ ಪೂಜಾರಿ, ಸಿದ್ದು ಜಂಬಗಿ, ಅರವಿಂದ ರಾಠೊಡ, ಸಂಗಮೇಶ ಅವಟಿ, ವಿಷ್ಣು ರಾಠೊಡ, ಪ್ರಶಾಂತ ಕಟ್ಟಿಮನಿ, ಕಾರ್ತಿಕ ಮುಚ್ಚಂಡಿ, ಪರಮೇಶ್ವರ ನಾಯ್ಕೋಡಿ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next