Advertisement

ಜಡ್ಜ್ ಗಳ ನಿವೃತ್ತಿ ವಯಸ್ಸು ಏರಿಕೆಗೆ ಅಸಮ್ಮತಿ

07:05 PM Dec 25, 2022 | Team Udayavani |

ನವದೆಹಲಿ: ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಜಡ್ಜ್ ಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವುದರಿಂದ ಉತ್ತಮ ಕಾರ್ಯಕ್ಷಮತೆ ಹೊಂದಿರದಂಥ ಕೆಲವು ಜಡ್ಜ್ಗಳ ಸೇವಾವಧಿಯನ್ನು ವಿಸ್ತರಣೆ ಮಾಡಿದಂತಾಗುತ್ತದೆ. ಅಲ್ಲದೇ, ಸರ್ಕಾರಿ ಉದ್ಯೋಗಿಗಳು ಕೂಡ ಇದೇ ಬೇಡಿಕೆಯನ್ನು ಮುಂದಿಡುವ ಸಾಧ್ಯತೆಗಳಿರುತ್ತದೆ ಎಂದು ಕೇಂದ್ರ ನ್ಯಾಯ ಇಲಾಖೆ ಸಂಸದೀಯ ಸಮಿತಿಗೆ ತಿಳಿಸಿದೆ.

Advertisement

ಜೊತೆಗೆ, ಉನ್ನತ ನ್ಯಾಯಾಂಗಕ್ಕೆ ನೇಮಕ ಮಾಡುವ ವೇಳೆ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಾತ್ರಿಪಡಿಸುವ ಕ್ರಮಗಳೊಂದಿಗೇ ನಿವೃತ್ತಿ ವಯಸ್ಸು ಏರಿಕೆಯನ್ನೂ ಪರಿಗಣಿಸಬಹುದು ಎಂದೂ ಹೇಳಿದೆ.

ಜುಲೈನಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಅವರು ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಏರಿಕೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸಂಸತ್‌ನಲ್ಲೇ ಹೇಳಿದ್ದರು.

ದೇಶದಲ್ಲಿ ಪ್ರಸ್ತುತ ಸುಪ್ರೀಂ ಕೋರ್ಟ್‌ ಜಡ್ಜ್ಗಳ ನಿವೃತ್ತಿ ವಯಸ್ಸು 65 ಆಗಿದ್ದರೆ, 25 ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು 62 ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next