Advertisement

ಪಂಪ್‌ಸೆಟ್‌ಗೆ ಮೀಟರ್‌ ಅಳವಡಿಕೆಗೆ ವಿರೋಧ

05:45 PM Sep 08, 2022 | Team Udayavani |

ಹೊಸಪೇಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿದ್ಯುತ್‌ ಖಾಸಗೀಕರಣ, ರೈತರ ಪಂಪ್‌ ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ವಿರೋಧಿಸಿ ನಗರದಲ್ಲಿ ಮಂಗಳವಾರ ರಾಜ್ಯ ರೈತ ಸಂಘದ ಹಾಗೂ ಹಸಿರುಸೇನೆ ವತಿಯಿಂದ ಬುಧವಾರ ಬೃಹತ್‌ ಪ್ರತಿಭಟನೆ ನಡೆಯಿತು.

Advertisement

ನಗರದ ಗಾಂಧಿ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಪುನೀತ್‌ರಾಜಕುಮಾರ ವೃತ್ತದಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿಯಾಗಿ ಮಾರ್ಪಟ್ಟಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರನ್ನು ಕೃಷಿಯಿಂದ ಹೊರ ಹಾಕುವ ನೀತಿಯನ್ನು ಜಾರಿಗೆ ತಂದು ಈ ಕೃಷಿ ಮಾರುಕಟ್ಟೆಯನ್ನು ರೈತರಿಂದ ಕಸಿದು ಕಂಪನಿಗಳಿಗೆ ನೀಡಲು ಮತ್ತು ಕೃಷಿ ಭೂಮಿಯನ್ನು ರೈತರಿಂದ ಕಸಿದುಕೊಂಡು ಹಣವಂತರು, ಕಾರ್ಪೋರೇಟ್‌ ಕಂಪನಿಗಳಿಗೆ ನೀಡಲು ಕಂದಾಯ ಕಾಯ್ದೆ 1961 ಮತ್ತು 1964 ಕಾನೂನಿಗೆ ತಿದ್ದುಪಡಿ ತಂದು ದೇಶದಲ್ಲಿ ಎಲ್ಲಿ ಇಲ್ಲದ ಕಾನೂನು ರಾಜ್ಯದಲ್ಲಿ ಜಾರಿಗೆ ತಂದು ರೈತರನ್ನು ನಾಶಮಾಡಲು ಹೊರಟಿದೆ ಎಂದು ಪ್ರತಿಭಟನಾಕಾರರು ದೂರಿದರು.

ಬೇಡಿಕೆಗಳು: ವಿದ್ಯುತ್‌ ಖಾಸಗೀಕರಣ, ರೈತರ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮಾಡಬಾರದು. ರೈತರು ಬೆಳೆದಂತಹ ಬೆಳೆಗಳಿಗೆ ಮೊದಲು ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡಿ (ಕಿರಾಣಿ ಅಂಗಡಿಯಲ್ಲಿರುವಂತಹ ಎಂ.ಆರ್‌.ಪಿ. ದರದ ಪ್ರಕಾರ) ರೈತರ ಬೆಳೆಗಳಿಗೆ ಅನ್ವಯವಾಗುವಂತೆ ಮಾಡಬೇಕು. ರೈತರಿಗೆ ಸರಿಯಾದ ರೀತಿಯಲ್ಲಿ ರಸಗೊಬ್ಬರ ಸಿಗುತ್ತಿಲ್ಲ.

ಈಗಿರುವ ಬೆಲೆಗಿಂತ ಹೆಚ್ಚಾಗಿ ಅಂಗಡಿ ಮಾಲೀಕರು ರೈತರಿಂದ ಪಡೆಯುತ್ತಿದ್ದಾರೆ. ಕೃಷಿ ಇಲಾಖೆ ಬರುವಂತಹ ಸೌಲಭ್ಯಗಳು ಗ್ರಾಮೀಣ ಮಟ್ಟದಲ್ಲಿ ಇರುವ ರೈತರಿಗೆ ದೊರೆಯುತ್ತಿಲ್ಲ. ಈ ಯೋಜನೆಗಳನ್ನು ಹಳ್ಳಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಮಲಾಪುರ ಕೆರೆಗೆ ಹೊಂದಿಕೊಂಡಂತ ಶಾದಿಮಹಲ್‌ ಹತ್ತಿರು ಬರುವಂಥ ತೂಬು ದುರಸ್ತಿಗೊಂಡಿದ್ದು ಈ ತೂಬಿನಲ್ಲಿ ಕಮಲಾಪುರದ ಚರಂಡಿ ನೀರು ಸೇರಿಕೊಂಡು ರೈತರ ಗದ್ದೆಗಳಿಗೆ ಹೋಗುತ್ತಿದೆ. ಕೂಡಲೇ ಈ ತೂಬನ್ನು ದುರಸ್ತಿಪಡಿಸಬೇಕು. ಕಮಲಾಪುರ ಕೆರೆಯನ್ನು ಈ ಹಿಂದೆ ಒತ್ತುವರಿ ಮಾಡಿದ್ದನ್ನು ತೆರವುಗೊಳಿಸಿ ಸರ್ವೇ ಮಾಡಿದ್ದರು. ಆದರೆ ಈ ಕೆಲವರು ಮತ್ತೇ ಕೆರೆಯನ್ನು ಒತ್ತುವರಿ ಮಾಡಿದ್ದಾರೆ.

Advertisement

ಕೆರೆ ಒತ್ತುವರಿ ಮಾಡಿದವರನ್ನು ತೆರವುಗೊಳಿಸಿ ಹದ್ದುಬಸ್ತು ಮಾಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ಸರಿಯಾಗಿ 3 ಫೇಸ್‌ ವಿದ್ಯುತ್‌ ಪೂರೈಕೆಯಾಗುತ್ತಿಲ್ಲ. ಆದ ಕಾರಣ ರೈತರ ಪಂಪ್‌ಸೆಟ್‌ಗಳಿಗೆ 12 ತಾಸು 3 ಫೇಸ್‌ ಪೂರೈಕೆ ಮಾಡಬೇಕು. ಕಂದಾಯ ಸಚಿವ ಆರ್‌. ಅಶೋಕ್‌ ಅವರು ನಮ್ಮ ಹತ್ತಿರ ಸರ್ಕಾರದ ಜಮೀನು 22 ಲಕ್ಷ ಎಕರೆ ಇದೆ ಎಂದು ಹೇಳಿದ್ದಾರೆ. ಈಗಿರುವ 22 ಲಕ್ಷ ಜಮೀನನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಆಗಮಿಸಿ ರೈತರ ಸಮಸ್ಯೆ ಆಲಿಸಿ, ವಿಧಾನಸಭೆ ಕಲಾಪದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ರೈತ ಮುಖಂಡರಿಗೆ ಭರವಸೆ ನೀಡಿದರು. ಸಂಘದ ರಾಜ್ಯ ಪ್ರ. ಕಾರ್ಯದರ್ಶಿ ಜೆ. ಕಾರ್ತಿಕ್‌, ಮುಖಂಡರಾದ ಸಣ್ಣಕ್ಕಿ ರುದ್ರಪ್ಪ, ಟಿ. ನಾಗರಾಜ, ತಾಯಪ್ಪ, ಮಲ್ಲಿಕಾರ್ಜುನ, ರೇವಣಸಿದ್ದಪ್ಪ, ಮಹಾಂತೇಶ, ಜೆ. ನಾಗರಾಜ, ಹೇಮರೆಡ್ಡಿ, ಗಾಳೆಪ್ಪ, ಕೆ.ಎಂ. ಕೊಟ್ರೇಶ, ಕೆ. ಹನುಮಂತಪ್ಪ, ಅಕ್ಬರ್‌, ಅಯ್ಯಣ್ಣ,
ನವೀನ್‌, ನವಾಜ್‌, ಎಲ್‌.ಎಸ್‌. ರುದ್ರಪ್ಪ, ಜಗನ್‌, ಜೆ. ಬಸವರಾಜ, ಬಿ. ಬಸವರಾಜ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next