Advertisement

ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿರೋಧ

09:46 AM Jul 04, 2020 | Suhan S |

ಬಳ್ಳಾರಿ: ಕೇಂದ್ರ, ರಾಜ್ಯಸರ್ಕಾರಗಳ ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ಎಚ್‌.ಆರ್‌. ಗವಿಯಪ್ಪ ವೃತ್ತದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ನೇತೃತ್ವ ವಹಿಸಿದ್ದ ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್‌ ಮಾತನಾಡಿ, ರಾಜ್ಯ, ಕೇಂದ್ರ ಸರ್ಕಾರಗಳು ಇಂಥ ಕೋವಿಡ್  ಸಂಕಷ್ಟದ ಸಮಯದಲ್ಲೂ ಕಾರ್ಮಿಕರ, ಜನರ ಬಗ್ಗೆ ಬೇಜವಾಬ್ದಾರಿತನ ತೋರುತ್ತಿವೆ. ಬಂಡವಾಳಶಾಹಿಗಳ ಪರವಾದ ನೀತಿಗಳನ್ನು ಜಾರಿಗೊಳಿಸುತ್ತಿದೆ. ಕಾರ್ಮಿಕ ವಿರೋಧಿ ನೀತಿಗಳನ್ನು ಎಲ್ಲ ಸಂಘಟನೆಗಳು ಒಕ್ಕೊರಲಿನಿಂದ ರಾಷ್ಟ್ರವ್ಯಾಪಿ ವಿರೋಧಿಸುತ್ತಿವೆ. ಈ ನೀತಿಗಳನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್‌ ಹೋರಾಟ ಸಂಘಟಿಸಲಾಗುವುದು. ರಾಜ್ಯ ಸರ್ಕಾರದ ನಮ್ಮ ಹೋರಾಟದ ಒತ್ತಡದಿಂದ ಕೆಲಸದ ಅವ ಧಿ ವಿಸ್ತರಿಸಿರುವಗದನ್ನು ಹಿಂಪಡೆದಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಶ್ರಮಿಸುತ್ತಿರುವ ಆಶಾ-ಅಂಗನವಾಡಿ ಹಾಗೂ ವಿವಿಧ ಕ್ಷೇತ್ರದಲ್ಲಿನ ಕಾರ್ಮಿಕರಿಗೆ ಕನಿಷ್ಟ 10 ಸಾವಿರ ರೂಪಾಯಿ ಪ್ರೋತ್ಸಾಹದನವನ್ನು ಸರ್ಕಾರ ಬಿಡುಗಡೆ ಮಾಡಬೇಕು. ಸಾರ್ವಜನಿಕ ಕ್ಷೇತ್ರ ಉದ್ದಿಮೆಗಳ ಖಾಸಗೀಕರಣ ಹಾಗೂ ಸಂಪೂರ್ಣ ಮಾರಾಟಕ್ಕೆ ಮುಂದಾಗಿವೆ ಎಂದು ಆರೋಪಿಸಿದರು.

ಎಐಟಿಯುಸಿ ಮುಖಂಡ ಇಸ್ಮಾಯಿಲ್‌ ಮಾತನಾಡಿ, ಸರ್ಕಾರಗಳು ದೇಶವನ್ನು ಮಾರಾಟ ಮಾಡಲು ನಿಂತಿವೆ. ಈ ಸರ್ಕಾರಗಳಿಗೆ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಅದಕ್ಕೆ ನಾವು ಬೀದಿಗಿಳಿಯುವ ಅನಿವಾರ್ಯತೆ ಇದೆ. ಕೇಂದ್ರದ ಬಿಜೆಪಿ ಸರ್ಕಾರ ಅಚ್ಛೇ ದಿನ್‌ ಎಂಬ ಘೋಷಣೆಯೊಂದಿಗೆ ಅಧಿಕಾರಕ್ಕೆ ಬಂದು ಇಡಿ ದೇಶವನ್ನೇ ಮಾರಾಟಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಾಕ್‌ಡೌನ್‌ ಕಾಲಾವಧಿ ಯ ಪೂರ್ಣ ವೇತನಕ್ಕಾಗಿ ಹಾಗೂ ಕೆಲಸ ನಿರಾಕರಣೆ ವಿರುದ್ಧ ಕ್ರಮಕೈಗೊಳ್ಳಬೇಕು. ಕಾರ್ಮಿಕ ಕಾನೂನುಗಳ ತಿದ್ದುಪಡಿ ಕೈಬಿಟ್ಟು, ಕಾರ್ಮಿಕ ಹಕ್ಕುಗಳನ್ನು ರಕ್ಷಿಸಬೇಕು. ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಕುಟುಂಬಕ್ಕೂ 6ತಿಂಗಳು ಮಾಸಿಕ 7500 ರೂ.ಗಳನ್ನು ನೇರ ನಗದು ವರ್ಗಾವಣೆ ಮಾಡಬೇಕು. ಗ್ರಾಮೀಣ ಭಾಗದಲ್ಲಿನ ನರೇಗ ಯೋಜನೆಯನ್ನು 200 ದಿನಗಳಿಗೆ ಹೆಚ್ಚಿಸಿ, ವಸಲೆ ಕಾರ್ಮಿಕರಿಗೆ, ಮತ್ತು ನಗರದ ಬಡ ಜನರಿಗೂ ವಿಸ್ತರಿಸಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಜೆ. ಸತ್ಯಬಾಬು, ಚಂದ್ರಕುಮಾರಿ, ಸಂಗನಕಲ್ಲು ಕಟ್ಟೆಬಸಪ್ಪ, ಶೇಖರ್‌ಬಾಬು ಸೇರಿದಂತೆ ಹಲವರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next