Advertisement

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ

01:27 PM Jun 16, 2020 | Suhan S |

ರಾಯಚೂರು: ಸುಗ್ರಿವಾಜ್ಞೆ ಮೂಲಕ ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸಿದ ಸರ್ಕಾರದ ನಡೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ನಗರದ ಡಾ|ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಭೂ ಸುಧಾರಣೆ ಕಾಯ್ದೆ ಕರಡು ಪ್ರತಿ ಸುಟ್ಟು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರೈತಪರ ಎಂದು ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ರೈತ ವಿರೋಧಿ ಕಾನೂನುಗಳನ್ನೇ ಜಾರಿಗೆ ತರುತ್ತಿರುವುದು ಖಂಡನೀಯ. ರಾಜ್ಯದಲ್ಲಿ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನೇ ಸರ್ಕಾರ ಜಾರಿಗೆ ತರುವ ಮೂಲಕ ಕೃಷಿ ವಲಯವನ್ನು ಮತ್ತಷ್ಟು ದುರ್ಬಲಗೊಳಿಸಲಾಗುತ್ತಿದೆ. ಜೂ.12ರಂದು ಭೂಸುಧಾರಣೆ ಕಾಯ್ದೆ ತಿದ್ದುಪಡಿಗಾಗಿ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಿರುವುದು ಖಂಡನೀಯ ಎಂದರು.

ಸಣ್ಣ, ಅತೀಸಣ್ಣ ರೈತರನ್ನು ಒಕ್ಕಲೆಬ್ಬಿಸಿ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಟ್ಟಂತಾಗಲಿದೆ. ಭೂ ಮಿತಿ ಹೆಚ್ಚಿಸಿ ಬಹುರಾಷ್ಟ್ರೀಯ ಕಂಪೆನಿಗಳಿಗೆ ರೈತರ ಭೂಮಿಯನ್ನು ಸುಲಭಕ್ಕೆ ವಶಪಡಿಸಿಕೊಳ್ಳಲು ಅನುಕೂಲ ಮಾಡಿದಂತಾಗಿದೆ. ಅದರ ಜತೆಗೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜತೆಗೆ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡಬೇಕು. 144 ಸೆಕ್ಷನ್‌ ಮುಗಿದ ಬಳಿಕ ರಾಜ್ಯಾದ್ಯಂತ ಜನಾಂದೋಲನ ನಡೆಸುವುದಾಗಿ ಎಚ್ಚರಿಸಿದರು.

ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ಜಿಲ್ಲಾಧ್ಯಕ್ಷ ಸೂಗುರಯ್ಯ ಸ್ವಾಮಿ, ಮುಖಂಡರಾದ ಬೂದಯ್ಯಸ್ವಾಮಿ ಗಬ್ಬೂರು, ಮಲ್ಲಣ್ಣ ದಿನ್ನಿ, ಬಸವರಾಜ ಪಾಟೀಲ, ಲಿಂಗಾರೆಡ್ಡಿ ಪಾಟೀಲ, ಸಿದ್ದರಾಮಯ್ಯ ಸ್ವಾಮಿ ಇದ್ದರು. ಬಳಿಕ ಅಪರ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next