Advertisement

ಮಾರುಕಟ್ಟೆ ಸ್ಥಳಾಂತರ ವಿರೋಧ ಸರಿಯಲ್ಲ

12:20 PM Feb 23, 2021 | Team Udayavani |

ರಾಮನಗರ: ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯನ್ನು ಚನ್ನ ಪಟ್ಟಣಕ್ಕೆ ಸ್ಥಳಾಂತರ ಮಾಡುವುದು ಸೂಕ್ತವಾಗಿದೆ. ರೈತರನ್ನು ಗಮನದಲ್ಲಿಟ್ಟುಕೊಂಡೇ ವಿಶಾಲವಾಗಿ ನಿರ್ಮಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

Advertisement

ನಗರದಲ್ಲಿ ಶ್ರೀಮತ್‌ ಕನ್ಯಕಾಪರಮೇಶ್ವರಿ ಅಮ್ಮನವರ ದೇವಾಲಯದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರೇಷ್ಮೆಗೂಡು ಮಾರುಕಟ್ಟೆ ಸ್ಥಳಾಂತರಕ್ಕೆ ರಾಜಕೀಯ ಕಾರಣಗಳೇನಿಲ್ಲ. ಪ್ರತಿಷ್ಠೆಯೂ ಇಲ್ಲ. ಈ ನಿರ್ಧಾರ ರೈತರಿಗಾಗಿಯೇ ಹೊರತು, ವ್ಯಾಪಾರಿಗಳಿಗಲ್ಲ ಎಂದರು.

ರೈತರಿಗೆ ಶಕ್ತಿ ತುಂಬಲು ಮಾರುಕಟ್ಟೆ ನಿರ್ಮಾಣ: ರೇಷ್ಮೆಗೂಡು ಮಾರುಕಟ್ಟೆ ಜಗತ್ತಿನಲ್ಲಿಯೇ ಪ್ರಸಿದ್ಧವಾದದ್ದು. ಹೀಗಾಗಿ ಇದನ್ನು ವಿಸ್ತರಿಸಿ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇತ್ತು. ರಾಮನಗರದಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲು ಕೆಲ ಅಡ್ಡಿಗಳಿದ್ದವು. ಈಗಿನ ಮಾರುಕಟ್ಟೆ ಪಕ್ಕದ ಜಮೀನು ಬಿಕ್ಕಟ್ಟು ನ್ಯಾಯಾಲಯದಲ್ಲಿದೆ. ಡೀಸಿ ಕಚೇರಿ ಪಕ್ಕದಲ್ಲಿ ಒಂದು ಎಕರೆ ಮಾತ್ರ ಸರ್ಕಾರಿ ಭೂಮಿಯಿದೆ. ಸ್ಥಳದ ಕೊರತೆ ಕಾರಣ ಅನಿ ವಾರ್ಯವಾಗಿ ವರ್ಗಾಯಿಸಬೇಕಾಗಿದೆ. ಹೀಗೆ ಅಡ್ಡಿಗಳು ಎದುರಾದ ಕಾರಣ ಚನ್ನಪಟ್ಟಣ ಬಳಿ ವಿಶಾಲ ಜಾಗದಲ್ಲಿ ಮಾರುಕಟ್ಟೆ ತಲೆ ಎತ್ತಲಿದೆ. ಹೈಟೆಕ್‌ ಮಾರುಕಟ್ಟೆ ನಿರ್ಮಿಸಿ ರೇಷ್ಮೆ ಕೃಷಿಕರಿಗೆ ಶಕ್ತಿ ತುಂಬಬೇಕಾಗಿದೆ ಎಂದರು.

ರಾಮನಗರಕ್ಕಿರುವ ರೇಷ್ಮೆ ನಗರಿ ಹೆಸರು ಕಳೆದುಕೊಳ್ಳುವ ಅಪಾಯವಿದೆ ಎಂಬ ಮಾತುಗಳು ನಾಗರಿಕರ ವಲಯದಲ್ಲ ಕೇಳಿ ಬರುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಎಲ್ಲಾ ಬೆಳೆಗಾರರು ರಾಮನಗರದಲ್ಲೇ ಇದ್ದಾರೆ. ರಾಮನಗರದ ಆಶ್ರಯದಲ್ಲೇ ಮಾರುಕಟ್ಟೆ ನಿರ್ಮಾಣವಾಗಲಿದೆ ಎಂದು ತೇಲಿಸಿದರು.

ನ್ಯಾಯ ಸಮ್ಮತ ನಿರ್ಧಾರ :

Advertisement

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಂಬಂಧಿಸಿದಂತೆ ಸರ್ಕಾರ ಎಲ್ಲ ರೀತಿಯಲ್ಲೂ ಪರಿಶೀಲನೆ ಮಾಡುತ್ತಿದೆ. ಇನ್ನಿತರೆ ಸಮುದಾಯಗಳು ಸಹ ಮೀಸಲಾತಿಗೆ ಸರ್ಕಾರಕ್ಕೆ ಮನವಿ ಮಾಡಿವೆ. ಎಲ್ಲರ ಬೇಡಿಕೆಗಳನ್ನು ಗಮನದಲ್ಲಿ ಇಟ್ಟುಕೊಂಡು ನ್ಯಾಯ ಸಮ್ಮತವಾದ ರೀತಿಯಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಪರವಾಗಿ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರು ನಡೆಸುತ್ತಿರುವ ಪ್ರತಿಭಟನೆ ಸರ್ಕಾರ ವಿರುದ್ಧ ಎಂದು ಅರ್ಥೈಸಬಾರದು. ಅವರು ತಮ್ಮ ಮತದಾರರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಡಾ.ಸಿ.ಎನ್‌.ಅಶ್ವತ್ಥನಾರಾಯಣ ಉಪಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next