ಬೆಂಗಳೂರು: ಸಾರ್ವಜನಿಕ ವಲಯದ ಹತ್ತು ಬ್ಯಾಂಕ್‌ಗಳನ್ನು ನಾಲ್ಕು ಬ್ಯಾಂಕ್‌ಗಳೊಂದಿಗೆ ವಿಲೀನ ಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯಿಸ್ ಫೆಡರೇಶನ್ ಹಾಗೂ ಬ್ಯಾಂಕ್ ಎಂಪ್ಲಾಯಿಸ್ ಫೆಡರೇಶನ್ ಆಫ್ ಇಂಡಿಯಾದ ಕರ್ನಾಟಕ ಘಟಕ ನೇತೃತ್ವದಲ್ಲಿ ಬ್ಯಾಂಕ್ ನೌಕರರು ಮಂಗಳವಾರ ಕಾರ್ಪೊ ರೇಷನ್ ಬ್ಯಾಂಕ್‌ನ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತ ನಾಡಿದ ಬ್ಯಾಂಕ್ ಎಂಪ್ಲಾಯಿಸ್ ಫೆಡರೇಶನ್ ಆಫ್ ಇಂಡಿಯಾ ಕರ್ನಾಟಕ ಘಟಕದ ಜಂಟಿ ಕಾರ್ಯದರ್ಶಿ ನಾಗ ರಾಜ್ ಶಾನ್‌ಬಾಗ್ ಅವರು, ಬ್ಯಾಂಕ್‌ಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಸರ್ಮಪಕ ಕಾರಣ ನೀಡುತ್ತಿಲ್ಲ. ಕಾರ್ಪೊರೇಟ್ ಹಿತಕಾಯಲು ಕೇಂದ್ರ ಸರ್ಕಾರ ವಿಲೀನದ ಮೊರೆ ಹೋಗಿದೆ ಎಂದು ದೂರಿದರು. ನೂರಾರು ಉದ್ಯಮಿಗಳು ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಬಾಕಿ ಉಳಿಸಿಕೊಂಡಿದ್ದಾರೆ. ಈ ರೀತಿ ಸಾಲ ಉಳಿಸಿಕೊಂಡವರ ಸಾಲ ಮನ್ನಾ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಬ್ಯಾಂಕ್‌ಗಳ ವಿಲೀನಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಬ್ಯಾಂಕಿಂಗ್ ಸೇವಾ ಶುಲ್ಕ ಹೆಚ್ಚಳ, ಗ್ರಾಹಕರ ಠೇವಣಿ ಮೇಲಿನ ಬಡ್ಡಿ ದರ ಕಡಿತಗೊಳಿಸುತ್ತಿದ್ದು, ಉದ್ಯಮಿಗಳಿಗೆ ಹಲವು ರೀತಿಯ ವಿನಾಯಿತಿ ನೀಡುತ್ತಿದೆ. ಈಗ ಬ್ಯಾಂಕ್‌ಗಳ ವಿಲೀನದ ಮುಖಾಂತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಮುಚ್ಚಲು ಮುಂದಾಗಿದೆ. ಬ್ಯಾಂಕ್ ಗಳ ವಿಲೀನ ವಿರೋಧಿಸಿ ದೇಶಾದ್ಯಂತ ಸಾಂಕೇತವಾಗಿ ಧರಣಿ ನಡೆಸಲಾಗಿದೆ. ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ, ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಬ್ಯಾಂಕ್ ವಿಲೀನ ಗ್ರಾಹಕರಿಗೆ ತೊಂದರೆ : ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್, ಅಲಹಾಬಾದ್ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ 10 ಬ್ಯಾಂಕ್ ಗಳನ್ನು 4 ಬ್ಯಾಂಕ್‌ಗಳಿಗೆ ವಿಲೀನಗೊಳಿಸುವ ನಿರ್ಧಾರದಿಂದ ಬ್ಯಾಂಕ್ ನೌಕರರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗುತ್ತದೆ. ಹೀಗಾಗಿ, ಕೇಂದ್ರ ಸರ್ಕಾರ ಕೂಡಲೇ ಈ ವಿಲೀನ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸಿದರು