Advertisement

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕುಪ್ಪಳ್ಳಿಯಿಂದ ಪಾದಯಾತ್ರೆ !

02:16 PM Jun 15, 2022 | Kavyashree |

ತೀರ್ಥಹಳ್ಳಿ:  ಬರಗೂರು ರಾಮಚಂದ್ರಪ್ಪ ಅವರ ಪಠ್ಯ ಪುಸ್ಥಕ ಸಮಿತಿಯನ್ನ ಮುಂದುವರೆಸಬೇಕು. ಕುವೆಂಪು ಅರವರನ್ನು ಅವಮಾನಿಸಿದ  ರೋಹಿತ್ ಚಕ್ರತೀರ್ಥರ ಪಠ್ಯಪುಸ್ತಕ ಸಮಿತಿಯನ್ನು ಕೈಬಿಡಬೇಕೆಂದು ಆಗ್ರಹಿಸಿ ಹಮ್ಮಿಕೊಳ್ಳಲಾದ ಪಾದಯಾತ್ರೆ ಕುಪ್ಪಳ್ಳಿಯಿಂದ ಆರಂಭವಾಗಿದೆ.

Advertisement

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕುವೆಂಪುರವರ ಜನ್ಮಸ್ಥಳ ಕುಪ್ಪಳ್ಳಿಯಿಂದ  ಆರಂಭಗೊಂಡ ಪಾದಯಾತ್ರೆಗೆ ಸಾಹಿತಿಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಪ್ರಗತಿಪರರು ಸಾಥ್ ನೀಡಿದ್ದಾರೆ.

ಕುಪ್ಪಳ್ಳಿಯ ಕವಿಶೈಲದಲ್ಲಿ ಕುವೆಂಪುರವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ  ಕಿಮ್ಮನೆ ರತ್ನಾಕರ್, ಪಾದಯಾತ್ರೆಯನ್ನು ಆರಂಭಿಸಿ ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ನಾಗೇಶರವರು ಮಾಡಿದ ಅಧ್ವಾನವನ್ನ ಕೈಬಿಡಬೇಕು, ಬಿಜೆಪಿಯ ಹೊಸ ಹೊಸ ಕಾರ್ಯಕ್ರಮವನ್ನ ಅನುಷ್ಠಾನಗೊಳಿಸಲು ನಮ್ಮ ವಿರೋಧವಿಲ್ಲ. ಆದರೆ ಚರ್ಚೆ ನಡೆಸಬೇಕು. ಸದನದಲ್ಲಿ ಚರ್ಚೆ ಮಾಡಬೇಕು. ವಿಷಯವಾರು ಸಮಿತಿ ರಚನೆ ಮಾಡಿ ಇಂತಹ ವಿಷಯವನ್ನ ಜಾರಿಗೊಳಿಸುತ್ತೇವೆ ಎಂಬುದನ್ನ ತಿಳಿಸಿ ನಂತರ ಅನುಷ್ಠಾನಗೊಳಿಸಬೇಕು ಎಂದರು.

ಪಾದಯಾತ್ರೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಸಾಹಿತಿಗಳಾದ ಜಿ.ಸಿದ್ದರಾಮಯ್ಯ, ಪ್ರೊಚೆನ್ನಿ, ವಕೀಲ ಶ್ರೀಪಾಲ, ನಾ.ಡಿಸೋಜ, ಡಿಎಸ್ ಎಸ್ ಗುರುಮೂರ್ತಿ, ರೈತ ಸಂಘಟನೆಯ ಕೆ.ಟಿ.ಗಂಗಾಧರ್, ಜಿಲ್ಲಾ ಕಸಾಪದ ಅಧ್ಯಕ್ಷ ಡಿ.ಮಂಜುನಾಥ್ ಸೇರಿ ಹಲವರು ಭಾಗವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next