Advertisement

ವಿದ್ಯುತ್‌ ಖಾಸಗೀಕರಣಕ್ಕೆ ವಿರೋಧ

02:04 PM Oct 20, 2020 | Suhan S |

ನೆಲಮಂಗಲ: ರಾಜ್ಯದ ವಿದ್ಯುತ್‌ ಕಂಪನಿಗಳ ಖಾಸಗೀಕರಣ ಮತ್ತು ವಿಭಾಗೀಯವಾರು ಟೆಂಡರ್‌ ನೀಡುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿ ಸಬೇಕೆಂದು ತಾಲೂಕು ವಿದ್ಯುತ್‌ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಹುರುಳಿಹಳ್ಳಿ ಮಂಜುನಾಥ್‌ ಆಗ್ರಹಿಸಿದರು.

Advertisement

ಪಟ್ಟಣದ ಮುಖ್ಯರಸ್ತೆಯಲ್ಲಿರುವ ಬೆಸ್ಕಾಂ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ತಾಲೂಕುಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೇತೃತ್ವವಹಿಸಿ ಮಾತನಾಡಿದರು.

ಜನಸಾಮಾನ್ಯರ ಮೂಲ ಸೌಕರ್ಯಗಳಲ್ಲಿ ಒಂದಾದ ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಕ್ಕೆ ಒಳಪಡಿಸಿದರೆ, ಈಗಿ ರುವ ಸರ್ಕಾರದ ಸವಲತ್ತುಳು ಕಡಿತವಾಗುತ್ತವೆ. ಇದರಿಂದಾಗಿ ರೈತರು ನೇಕಾರರು,ಕೂಲಿ ಕಾರ್ಮಿಕರು ಮೂಲಸೌಕರ್ಯಗಳಿಗಾಗಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.

ವಿದ್ಯುತ್‌ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ನಾವು ಬಂಡವಾಳ ಶಾಹಿಗಳ ಅಡಿಯಲ್ಲಿ ಕೂಲಿ ಮಾಡುವ ಸ್ಥಿತಿಗೆ ಬರಬೇಕಾಗುತ್ತದೆ. ಇದರಿಂದ ಸಾಕಷ್ಟು ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ‌ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿದ್ಯುತ್‌ ಸರಬ ರಾಜು ಕಂಪನಿಗಳನ್ನು ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು.

ಮನವಿ: ಬೆಂಗಳೂರು ವಿದ್ಯುತ್‌ ಕಂಪನಿಯ ಖಾಸಗೀಕರಣ ವಿರೋಧಿಸಿ ಪ್ರತಿಭಟನಾಕಾರರು ಕಾರ್ಯಪಾಲಕ ಅಭಿಯಂತರ ಬಿ.ಟಿ.ಗಂಗರಾಜು ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ವಿದ್ಯುತ್‌ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷಕಾಸರಘಟ್ಟಯೋಗಾನಂದ್‌, ಎನ್‌.ನಾಗರಾಜ್‌, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿ.ಮಾರಯ್ಯ, ಹೊನ್ನಪ್ಪ, ಕೋಶಾಧ್ಯಕ್ಷ ಕೃಷ್ಣಪ್ಪ, ಪದಾಧಿಕಾರಿಗಳಾದ ಕೆ.ಬೈರೇಗೌಡ,ಸಂಪತ್‌ ಕುಮಾರ್‌, ಡಾಬಸ್‌ಪೇಟ್‌ನಾಗರಾಜ್‌, ಯಲಚಗೆರೆ ಹನುಮಂತ ರಾಜು ಮತ್ತಿತರರು ಉಪಸ್ಥಿತರಿದ್ದರು.

Advertisement

 

ಕೋವಿಡ್ ಜಾಗೃತಿ ಅಭಿಯಾನ :

ದೊಡ್ಡಬಳ್ಳಾಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ನಗರಸಭೆ, ಪೊಲೀಸ್‌ ಇಲಾಖೆ,ಆರೋಗ್ಯ ಇಲಾಖೆ, ತಾಲೂಕು ಆಡಳಿತದ ಸಹಯೋಗದಲ್ಲಿ ಕೋವಿಡ್‌-19 ಜನಾಂದೋಲನ ಅಭಿಯಾನ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದಹಿರಿಯ ಸಿವಿಲ್‌ ನ್ಯಾಯಾಧೀಶರಾದ ಎಂ.ಬಿ.ಕುಲಕರ್ಣಿ, ಕೋವಿಡ್ ಸೋಂಕು ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು ಎಂದರು.

ಸಾಮಾಜಿಕ ಅಂತರ ಕಾಯ್ದುಕೊಂಡು ಆತ್ಮ ವಿಶ್ವಾಸ ತುಂಬುವುದರ ಜೊತೆಗೆ ಸೋಂಕು ಹರಡುವುದನ್ನು ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು. ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್‌ನ್ಯಾಯಾಧೀಶರಾದ ಸಂದೀಪ್‌ ಎ. ನಾಯಕ್‌ ಮಾತನಾಡಿ, ಕೋವಿಡ್ ಸೋಂಕು ನಿಗ್ರಹಕ್ಕೆ ಸಾರ್ವಜನಿಕರ ಪಾತ್ರ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತೆಅನಿವಾರ್ಯತೆಯನ್ನುವಿವರಿಸಿದರು.

ಅಭಿಯಾನದ ಅಂಗವಾಗಿ ಪ್ರತಿಜ್ಞೆ ವಿಧಿ ಸ್ವೀಕರಿಸಲಾಯಿತು.ನಗರದಪ್ರಮುಖರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌, ತಾಲೂಕು ಆರೋ ಗ್ಯಾಧಿಕಾರಿ ಡಾ. ಪರಮೇಶ್ವರ ಮತ್ತಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next