Advertisement

ಮೈ ಷುಗರ್‌ ಕಂಪನಿ ಖಾಸಗೀಕರಣಕ್ಕೆ ವಿರೋಧ

02:30 PM May 09, 2020 | mahesh |

ಮಂಡ್ಯ: ಜಿಲ್ಲೆಯ ಜೀವನಾಡಿ ಮೈಸೂರು ಸಕ್ಕರೆ ಕಂಪನಿಯನ್ನು ಖಾಸಗೀಕರಣಗೊಳಿಸದೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿಕೊಳ್ಳುವಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ
ಮುಖಂಡರು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸಕ್ಕರೆ ಸಚಿವ ಶಿವರಾಂ ಹೆಬ್ಟಾರ್‌ ನೇತೃತ್ವದಲ್ಲಿ ಮೈಷುಗರ್‌ ಕಾರ್ಖಾನೆ ಪುನಶ್ಚೇತನ ಕುರಿತು ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಭಾಗವ ಹಿಸಿ ಮೈಷುಗರ್‌ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವುದು ಬೇಡ. ಸರ್ಕಾರಿ ಸ್ವಾಮ್ಯ ದಲ್ಲಿಯೇ ಕಂಪನಿಯನ್ನು ಸಮರ್ಥವಾಗಿ ಮು
ನ್ನಡೆಸಬೇಕು ಎಂದು ಮನವಿ ಮಾಡಿದರು.

Advertisement

ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸುವುದರಿಂದ ಜಿಲ್ಲೆಯ ಅಸ್ಮಿತೆ ಕಳೆದುಕೊಳ್ಳಲಿದೆ. ಖಾಸಗಿಯವರು ಆದಾಯ ಹಂಚಿಕೆ ಮಾಡುವುದಿಲ್ಲ. ಇದರಿಂದ ಕೇಂದ್ರ ಸರ್ಕಾರದ ನೀತಿಯಂತೆ ಉತ್ಪಾದನೆಯಲ್ಲಿ ಶೇ.70ರಷ್ಟು ರೈತರಿಗೆ ಹಾಗೂ ಶೇ.30ರಷ್ಟು ಕಾರ್ಖಾನೆಗೆ ಎಂಬುದನ್ನು ತಿಳಿಯಲು ಅಸಾಧ್ಯವಾಗಲಿದೆ. ಅಲ್ಲದೆ, ಕಾರ್ಖಾನೆಯ ಆಸ್ತಿ ಕೈತಪ್ಪಿಹೋಗುವ ಸಾಧ್ಯತೆಗಳಿವೆ ಎಂಬು ದನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಖಾನೆಗೆ ದುಡಿಯುವ ಬಂಡವಾಳವಾಗಿ 10ರಿಂದ 12 ಕೋಟಿ ರೂ. ಹಣವನ್ನು ರಾಜ್ಯಸರ್ಕಾರ ಮೈಷುಗರ್‌ಗೆ ನೀಡಿದಲ್ಲಿ ಕಂಪನಿಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಅಭಿವೃದ್ಧಿಪಡಿಸಬಹುದು. ಹೀಗಿರುವಾಗ ಕಂಪನಿಯನ್ನು ಖಾಸಗೀಕರಣ ಮಾಡುವುದು ಸರಿಯಲ್ಲ. ಸರ್ಕಾರವೇ ಕಾರ್ಖಾನೆಯನ್ನು ಮುನ್ನಡೆಸಿ ಆರ್ಥಿಕ ಶಕ್ತಿ ತುಂಬಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯ ಣಗೌಡ ಮಾತನಾಡಿ, ಮೈಸೂರು ಸಕ್ಕರೆ ಕಾರ್ಖಾನೆ ನೂರಾರು ಕೋಟಿ ರೂ. ನಷ್ಟದಲ್ಲಿದೆ. ಆದ್ದರಿಂದ ಕಾರ್ಖಾನೆಯನ್ನು ಖಾಸಗಿ ಯವರಿಗೆ ನೀಡಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಕಂಪನಿಯ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಮಾತ್ರ ಖಾಸಗಿಯವರಿಗೆ ನೀಡಲಾಗುತ್ತಿದೆಯೇ ವಿನಃ ಕಾರ್ಖಾನೆಯ ಯಾವುದೇ ಆಸ್ತಿ
ಯನ್ನೂ ನೀಡುತ್ತಿಲ್ಲ. ರೈತರ ಹಿತ ಕಾಪಾಡಲು ಆದಷ್ಟು ಬೇಗ ಸಕ್ಕರೆ ಕಾರ್ಖಾನೆ ಆರಂಭವಾಗಬೇಕಿದೆ. ಆ ದಿಸೆಯಲ್ಲಿ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವರು
ಹೇಳಿದಾಗ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಯಿತು.

ಸಿಎಂ ಗಮನಕ್ಕೆ ತಂದು ಅಂತಿಮ ನಿರ್ಧಾರ
ಈಗಾಗಲೇ ಮೈಷುಗರ್‌ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಕೊರೊನಾ ಸಮಸ್ಯೆ ಇಲ್ಲದಿದ್ದರೆ ಇಷ್ಟೊತ್ತಿಗೆ ಟೆಂಡರ್‌ ಪ್ರಕ್ರಿಯೆ
ಮುಗಿಯುತ್ತಿತ್ತು. ಈಗ ನೀವು ಸರ್ಕಾರಿ ಸ್ವಾಮ್ಯದಲ್ಲಿಯೇ ನಡೆಸುವಂತೆ ಮನವಿ ಮಾಡಿದ್ದೀರಾ, ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಗಮನಕ್ಕೆ ತಂದು ಮುಂದಿನ ನಿರ್ಧಾರ
ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವರಾಮ್‌ ಹೆಬ್ಟಾರ್‌ ಭರವಸೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next