ಕಲಬುರಗಿ: ಟಿಪ್ಪು ಸುಲ್ತಾನ್ ಜಯಂತಿಯಂದು ಪ್ರತಿಭಟನೆ ನಿಷೇsaಧಿಸಿದ್ದರೂ ಅದನ್ನು ಉಲ್ಲಂಘಿಸಿ ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ಮಾಡಿದ 30 ಜನ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿದರು. ಬಂಧಿತರಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಶರಣು ಸಲಗರ, ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷರು, ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ನಸಲ್ವಾಯಿ ಅವರು ಸೇರಿದ್ದಾರೆ.
ಟಿಪ್ಪು ಜಯಂತಿ ನಿಮಿತ್ತ ನಗರದ ಆಯಕಟ್ಟಿನ ಪ್ರದೇಶದಲ್ಲಿ, ಅದರಲ್ಲಿಯೂ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಸ್ವತಃ ಈಶಾನ್ಯ ವಲಯ ಪೊಲೀಸ್ ಮಹಾನಿರ್ದೇಶಕ ಅಲೋಕಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಕಟ್ಟೆಚ್ಚರವಹಿಸುವಂತೆ ಬಂದೋಬಸ್ತ್ನಲ್ಲಿದ್ದ ಪೊಲೀಸರಿಗೆ ಸೂಚಿಸಿದ್ದರು. ಸ್ಥಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳೆಲ್ಲರೂ
ಇದ್ದರು.
ಅಂತಹ ಬಿಗಿ ಪಹರೆಯಲ್ಲಿಯೂ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ಬಿಜೆಪಿಯ ಗುಂಪೊಂದು ಟಿಪ್ಪು ಜಯಂತಿ ವಿರೋಧಿಸಿ ಘೋಷಣೆಗಳನ್ನು ಹಾಕಿತು. ಕೂಡಲೇ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಅವರನ್ನು ಬಂಧಿಸಿ ಕರೆದುಕೊಂಡು ಹೋದರು. ಶರಣು ಸಲಗರ ಅವರನ್ನಂತು ಪೊಲೀಸರು ಹಿಡಿದು ಎಳೆದುಕೊಂಡು ಹೋದರು. ಅವರನ್ನು ಹೊರತುಪಡಿಸಿದರೆ ಉಳಿದ ಬಿಜೆಪಿಯ ಹಿರಿಯ ಮುಖಂಡರ್ಯಾರೂ ಪ್ರತಿಭಟನೆಯತ್ತ ತಲೆ ಹಾಕಲಿಲ್ಲ.
ಕಾರ್ಯಕ್ರಮಕ್ಕೆ ಗೈರು: ಜಿಲ್ಲಾಡಳಿತದಿಂದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಬಿಜೆಪಿಯ ಯಾವೊಬ್ಬ ಜನಪ್ರತಿನಿಧಿಗಳು ಭಾಗವಹಿಸದೇ ಬಹಿಷ್ಕರಿಸಿದರು. ರಾಜ್ಯಸಭಾ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ, ಬೀದರ್ ಸಂಸದ ಭಗವಂತ್ ಖೂಬಾ, ಅಧ್ಯಕ್ಷತೆ ವಹಿಸಬೇಕಿದ್ದ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ರಾಜ್ಯ ವಿಧಾನ ಪರಿಷತ ಸದಸ್ಯ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ್, ಅಮರನಾಥ
ಪಾಟೀಲ್ ಗೈರು ಹಾಜರಿ ಎದ್ದು ಕಂಡಿತು.