ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆ ಬಿರುಸು ಪಡೆದಿತ್ತು. ಮಂಗಳೂರು ನಗರದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಮಳೆ ತುಸು ಬಿರುಸು ಪಡೆದಿತ್ತು. ಸೆಕೆಯ ಪ್ರಮಾಣ ಹೆಚ್ಚಿತ್ತು.
Advertisement
ಉಡುಪಿ: ಉತ್ತಮ ಮಳೆಉಡುಪಿ,: ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ, ಬುಧವಾರ ವ್ಯಾಪಕ ಮಳೆ ಸುರಿದಿದೆ. ಮಂಗಳವಾರ ತಡರಾತ್ರಿ ಕಾಪು, ಬ್ರಹ್ಮಾವರ, ಉಡುಪಿ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಗಾಳಿ-ಮಳೆಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳದಲ್ಲಿಯೂ ಹೆಚ್ಚಿನ ಮಳೆಯಾಗಿದೆ. ಬುಧವಾರ ಬಿಸಿಲು-ಮೋಡ ಕವಿದ ವಾತಾವರಣ ನಡುವೆ ಬಿಟ್ಟುಬಿಟ್ಟು ಮಳೆಯಾಗಿದೆ. ಸಂಜೆ ಅನಂತರ ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸುತ್ತಮುತ್ತ ಉತ್ತಮ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 34.0 ಮಿ. ಮಿ. ಸರಾಸರಿ ಮಳೆಯಾಗಿದೆ.
ಕಾಸರಗೋಡು: ಭಾರೀ ಮಳೆಯಾಗುವ ಸಾಧ್ಯñ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸೆ. 8ರಂದು ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಣ್ಣೂರು ಮತ್ತು ತಿರುವನಂತಪುರ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಿಸಿದೆ. ಮಲೆನಾಡು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಕಟ್ಟೆಚ್ಚರ ಘೋಷಿಸಲಾಗಿದೆ. ಮಳೆಯ ಜತೆ ಸುಂಟರ ಗಾಳಿ ಬೀಸುವ ಸಾಧ್ಯತೆಯಿದೆ.
Related Articles
Advertisement