ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5ರಿಂದ 8ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯನ್ನು ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸೆ.5, 6 ಮತ್ತು 7ರಂದು ಆರೆಂಜ್ ಅಲರ್ಟ್ ಹಾಗೂ ಸೆ.8ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಸೆ.6, 7 ಮತ್ತು 8ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸೆ.5, 6 ಮತ್ತು 7ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹೇಳಿದೆ.
ಇದನ್ನೂ ಓದಿ:ಕಾನೂನು ಬಾಹಿರವಾಗಿ ಮತಾಂತರ, 8 ಮಂದಿ ಬಂಧನ : ಅಂಗವಿಕಲರು, ನಿರುದ್ಯೋಗಿಗಳೇ ಇವರ ಟಾರ್ಗೆಟ್
ನೈರುತ್ಯ ಮುಂಗಾರು ಶನಿವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು. ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗಿದೆ. ಉತ್ತರ ಕನ್ನಡದ ಗೋಕರ್ಣದಲ್ಲಿ 13 ಸೆಂ.ಮೀ., ಧರ್ಮಸ್ಥಳದಲ್ಲಿ 11 ಸೆಂ.ಮೀ., ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ 9 ಸೆಂ.ಮೀ., ಉತ್ತರ ಕನ್ನಡದ ಕುಮಟಾ, ಅಂಕೋಲಾ, ಹಾಸನ, ಆಗುಂಬೆಯಲ್ಲಿ ತಲಾ 8 ಸೆಂ.ಮೀ., ಉತ್ತರ ಕನ್ನಡದ ಶಿರಾಲಿ, ಮಂಕಿ (ಡಿಟಿ), ಉಡುಪಿಯ ಸಿ¨ªಾಪುರ, ಯಾದಗಿರಿಯ ಸೈದಾಪುರದಲ್ಲಿ ತಲಾ 7 ಸೆಂ.ಮೀ.,, ಕಾರವಾರದಲ್ಲಿ 6 ಸೆಂ.ಮೀ., ದಕ್ಷಿಣ ಕನ್ನಡದ ಮಂಗಳೂರು, ಪುತ್ತೂರು, ಮಣಿ, ಸುಳ್ಯ, ಉಡುಪಿಯ ಕಾರ್ಕಳ, ಬ್ರಹ್ಮಾವರ, ಕೋಟ ಹಾಗೂ ಹಾಸನದ ಶ್ರವಣಬೆಳಗೊಳದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.