ಬೆಂಗಳೂರು: ರಾಜ್ಯ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಳಗಿನ ಸಮಯದಲ್ಲಿ ಸಿಡಿಲು ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ:ಪಾಕ್ ಗ್ರಾಹಕರು, ಸೇನಾ ಘಟಕದ ಸಂಪರ್ಕ! ಇಬ್ರಾಹಿಂ ಪುಲ್ಲಟ್ಟಿಯಿಂದ ಸ್ಫೋಟಕ ಮಾಹಿತಿ ಬಹಿರಂಗ
ಜೂನ್ 12ರಂದು ಬೆಳಗ್ಗೆ 8.30ರಿಂದ ಜೂನ್ 16ರಂದು ಬೆಳಗ್ಗೆ 8.30ರವರೆಗೆ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಮಳೆಯ ಜತೆ ಗಾಳಿ ಮತ್ತು ಸಿಡಿಲು ಕೂಡ ಇರಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.