Advertisement

ಕೇರಳದ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಉಳಿದೆಡೆ ಯೆಲ್ಲೋ ಅಲರ್ಟ್

07:22 PM Nov 15, 2021 | Team Udayavani |

ಕೇರಳ: ಎರ್ನಾಕುಳಂ, ಇಡುಕ್ಕಿ, ತ್ರಿಶ್ಶೂರ್, ಕೋಝಿಕೋಡ್, ಕಣ್ಣೂರು ಮತ್ತು ಕಾಸರಗೋಡು ಸೇರಿ ಕೇರಳದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಸೋಮವಾರ ಆರೆಂಜ್ ಅಲರ್ಟ್ ಜಾರಿಗೊಳಿಸಿದೆ ಎಂದು ವರದಿ ತಿಳಿಸಿದೆ.

Advertisement

ರಾಜ್ಯದ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಜಿಲ್ಲೆಗಳಲ್ಲಿ 6ಸೆಂ.ಮೀಟರ್ ನಿಂದ 20 ಸೆಂಟಿ ಮೀಟರ್ ವರೆಗೆ ಮಳೆಯಾಗಲಿದೆ ಎಂದು ಎಚ್ಚರಿಸಿದೆ.

ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ 6ರಿಂದ 11ಸೆಂಟಿ ಮೀಟರ್ ಮಳೆಯಾಗಲಿದೆ. ಒಂದು ರೆಡ್ ಅಲರ್ಟ್ ಘೋಷಿಸಿದ್ದರೆ, ಆ ಜಿಲ್ಲೆಗಳಲ್ಲಿ 24ಗಂಟೆಯಲ್ಲಿ 20ಸೆಂಟಿಮೀಟರ್ ಗಿಂತ ಅಧಿಕ ಮಳೆಯಾಗಲಿದೆ ಎಂದು ವಿವರಿಸಿದೆ.

ಅಂಡಮಾನ್ ಉತ್ತರ ಭಾಗದ ಸಮುದ್ರ ಪ್ರದೇಶದಲ್ಲಿ ವಾಯುಭಾರ ಕುಸಿಯಲಿದ್ದು, ಇದರಿಂದಾಗಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀಟರ್ ನಷ್ಟು ಸೈಕ್ಲೋನ್ ಮೇಲಕ್ಕೇಳಲಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next