Advertisement
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 115 ರಿಂದ 205 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.
ಉಳಿದಂತೆ ಬುಧವಾರ ಬೆಳಗ್ಗೆಯ ಹವಾಮಾನ ಇಲಾಖೆಯ ಅಂಕಿ ಅಂಶದ ಪ್ರಕಾರ ಮಂಗಳವಾರ ದಾವಣಗೆರೆಯ ಉಚ್ಚಂಗಿ ದುರ್ಗದಲ್ಲಿ ಅತಿ ಹೆಚ್ಚು 8 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕಿರವತ್ತಿಯಲ್ಲಿ 7, ಮಂಗಳೂರು ವಿಮಾನ ನಿಲ್ದಾಣ 6, ದಕ್ಷಿಣ ಕನ್ನಡದ ಪಣಂಬೂರು, ಬೀದರ್‍ನ ಹುಮನಾಬಾದ್, ಗದಗದ ನರಗುಂದ, ದಾವಣಗೆರೆಯ ಸಂತೆಬೆನ್ನೂರಿನಲ್ಲಿ ತಲಾ 5 ಸೆಂ.ಮೀ ಮಳೆಯಾಗಿರುವುದು ವರದಿಯಾಗಿದೆ.