Advertisement
ಮಂಗಳೂರು ನಗರದಲ್ಲಿ ಶನಿವಾರ ಮಧ್ಯ ರಾತ್ರಿಯಿಂದಲೇ ಉತ್ತಮ ಮಳೆಯಾಗಿದ್ದು, ರವಿವಾರವೂ ಮುಂದುವರಿದಿತ್ತು. ಬಿರುಸಿನ ಮಳೆಗೆ ಮರೋಳಿ ಬಳಿ ಮನೆಯೊಂದರ ಗೋಡೆ ಕುಸಿದಿದೆ. ಜಿಲ್ಲೆಯ ಪುತ್ತೂರು, ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯ, ಸುಳ್ಯ, ಜಾಲೂÕರು, ಕಲ್ಮಕಾರು, ಐನೆಕಿದು, ಹರಿಹರ ಪಲ್ಲತ್ತಡ್ಕ, ಧರ್ಮಸ್ಥಳ, ನಾರಾವಿ, ಮಡಂತ್ಯಾರು, ಬೆಳ್ತಂಗಡಿ, ಬಂಟ್ವಾಳ, ಕನ್ಯಾನ, ಸುರತ್ಕಲ್, ಉಳ್ಳಾಲ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯಾ ದ್ಯಂತ ಉತ್ತಮ ಮಳೆಯಾಗಿದೆ.
ಸುಳ್ಯ: ತೆಂಗಿನ ಮರವೊಂದು ವಿದ್ಯುತ್ ಲೈನ್ ಗೆ ಬಿದ್ದ ಘಟನೆ ರವಿವಾರ ಸುಳ್ಯ ತಾಲೂಕಿನ ಬಾಳಿಲದಲ್ಲಿ ಸಂಭವಿಸಿದೆ. ನಿಂತಿಕಲ್ಲು ಬೆಳ್ಳಾರೆ ರಸ್ತೆಯ ಬಾಳಿಲ ಗ್ರಾಮದ ಟಪ್ಪಾಲುಕಟ್ಟೆ ಎಂಬಲ್ಲಿ ಮುಖ್ಯ ರಸ್ತೆ ಬದಿಯ ವಿದ್ಯುತ್ ಲೈನ್ ಪಕ್ಕದ ತೋಟದ ತೆಂಗಿನ ಮರ ವಾಲಿ ಬಿದ್ದಿದೆ.
Related Articles
Advertisement
ಇದನ್ನೂ ಓದಿ : ಭಾರಿ ಮಳೆ : ವರ್ಕಾಡಿ ಸುಂಕದಕಟ್ಟೆಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ, ತಪ್ಪಿದ ದುರಂತ
ಮೀನುಗಾರರಿಗೆ ಎಚ್ಚರಿಕೆಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಆ. 8ರಿಂದ 9ರ ವರೆಗೆ “ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ ಇರಲಿದ್ದು, ಸಮುದ್ರದ ಅಬ್ಬರ ಕೂಡ ಹೆಚ್ಚಿರುವ ಸಾಧ್ಯತೆ ಇದೆ. ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಆ. 8ರ ವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ತೆರಳಿರುವ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.