Advertisement

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಆದೇಶವನ್ನು ಕೂಡಲೇ ಹಿಂಪಡೆಯಬೇಕು: ಸಿದ್ದರಾಮಯ್ಯ

04:17 PM Aug 08, 2021 | Team Udayavani |

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಕೂಡಲೇ ಹಿಂಪಡೆದು ವಿಸ್ತೃತ ಚರ್ಚೆ ನಡೆಸಿದ ಬಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು, ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಗೊಂದಲವಿಲ್ಲ, ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ

ಈ ನಾಡಿನ ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ರಾಜ್ಯದ ಮೇಲೆ ಹೇರಬೇಡಿ, ಸಂಬಂಧಿಸಿದ ವಲಯಗಳ ಜನರ ಜೊತೆಗೆ ವಿಸ್ತೃತ ಚರ್ಚೆ ನಡೆಸಿ, ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ತೀರ್ಮಾನಿಸಿ ಎಂದು‌ ಹೇಳಿದ್ದೆವು. ಆದರೆ ಹಾಗೆ ಮಾಡದೆ ಈ ಅನಾಹುತಕಾರಿ ನೀತಿಯನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೆ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ಆದೇಶದಲ್ಲಿ ಹಲವಾರು ಅಪಾಯಕಾರಿಯಾದ ಅಂಶಗಳಿವೆ. ಬಡವರ, ಮಧ್ಯಮ ವರ್ಗದವರ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಕನಸಿಗೆ ನೇರವಾಗಿ ಬೆಂಕಿ ಇಡುವ ಪ್ರಕ್ರಿಯೆಯ ಭಾಗವಾಗಿ ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹೊರಡಲಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next