Advertisement

ಕನ್ನಡದಲ್ಲಿಯೇ ಕಡತ ಮಂಡನೆಗೆ ಆದೇಶ

10:42 PM Nov 22, 2019 | Lakshmi GovindaRaj |

ಬೆಂಗಳೂರು: ಆಡಳಿತದಲ್ಲಿ ಕನ್ನಡವನ್ನು ಪರಿಣಾಮಕಾರಿ ಯಾಗಿ ಜಾರಿಗೊಳಿಸಲು ಎಲ್ಲ ಹಂತದಲ್ಲಿಯೂ ಅಧಿಕಾರಿಗಳು ಕಡತ ಹಾಗೂ ಟಿಪ್ಪಣಿಗಳನ್ನು ಕನ್ನಡದಲ್ಲಿಯೇ ಮಂಡಿಸುವಂತೆ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

Advertisement

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಅವರು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ತನ್ನ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮ, ಬಿಎಂಆರ್‌ಸಿಎಲ್‌, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರ ಭೂ ಸಾರಿಗೆ ನಿರ್ದೇಶನಾಲಯಗಳೂ ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುವುದರಿಂದ ಎಲ್ಲ ಹಂತದ ಅಧಿಕಾರಿಗಳು ಕಡತ ಹಾಗೂ ಟಿಪ್ಪಣಿಗಳನ್ನು ಕನ್ನಡದಲ್ಲಿಯೇ ಮಂಡಿಸುವುದು ಸರ್ಕಾರದ ಭಾಷಾ ನೀತಿಯಾಗಿದೆ. ಒಂದು ವೇಳೆ ಆಂಗ್ಲ ಭಾಷೆಯಲ್ಲಿ ಕಡತ ಮಂಡಿಸುವ ಅಧಿಕಾರಿಗಳಿಗೆ ಕಡತ ಹಿಂದಿರುಗಿಸಿ, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next