Advertisement

ಭಡ್ತಿ ಮೀಸಲು ಅನುಷ್ಠಾನಕ್ಕೆ ಆದೇಶ

01:58 AM May 16, 2019 | Team Udayavani |

ಬೆಂಗಳೂರು: ಮೀಸಲಾತಿ ಆಧಾರದಲ್ಲಿ ಭಡ್ತಿ ಹೊಂದಲು ರಾಜ್ಯ ಸರಕಾರ ಜಾರಿಗೆ ತಂದಿರುವ 2017ರ ತತ್ಪರಿಣಾಮದ ಜೇಷ್ಠತೆ ವಿಸ್ತರಿಸುವ ಕಾಯ್ದೆ ಅನುಷ್ಠಾನಗೊಳಿಸುವಂತೆ ರಾಜ್ಯ ಸರಕಾರ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ.

Advertisement

ಬಿ.ಕೆ. ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೇ 10ರಂದು ಆದೇಶ ನೀಡಿದ್ದು, ರಾಜ್ಯ ಸರಕಾರ ಮೀಸಲಾತಿ ಆಧಾರದಲ್ಲಿ ಭಡ್ತಿ ಹೊಂದಿದ ಎಸ್ಸಿ-ಎಸ್ಟಿ ನೌಕರರ ಹಿತ ಕಾಯಲು ತತ್ಪರಿಣಾಮದ ಜೇಷ್ಠತೆ ವಿಸ್ತರಿಸುವ ಕಾಯ್ದೆ 2017ನ್ನು ಮಾನ್ಯ ಮಾಡಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್‌ 5ರಂದು ಹೊರಡಿಸಿರುವ ಆದೇಶ ವನ್ನು ಹಿಂಪಡೆದಿದೆ. ಫೆಬ್ರ ವರಿ 27ರಂದು ರಾಜ್ಯ ಸರಕಾರ ಹೊರಡಿಸಿರುವ ಆದೇಶದಂತೆ ಮುಂಭಡ್ತಿ ಪಡೆಯುವ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು ಮೂವತ್ತು ದಿನಗಳೊಳಗೆ ಪೂರ್ಣಗೊಳಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಲೋಕಸಭೆ ಚುನಾವಣೆ ಕಾರ್ಯದಲ್ಲಿ ನಿಯುಕ್ತಿಗೊಂಡಿರುವ ಅಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಪೂರ್ಣಗೊಂಡ ಅನಂತರ ತಮಗೆ ನಿಯೋಜಿಸಿದ ಸ್ಥಳಕ್ಕೆ ವರದಿ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ. ಸದ್ಯ ಚುನಾವಣ ಕೆಲಸದ ಮೇಲಿರುವ ಅಧಿಕಾರಿಗಳ ಭಡ್ತಿ ಆದೇಶ ನೀತಿ ಸಂಹಿತೆ ಮುಕ್ತಾಯಗೊಂಡ ಅನಂತರ ಅನ್ವಯಗೊಳ್ಳಲಿದೆ.

ಸರಕಾರದ ಈ ಆದೇಶವನ್ನು ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಡಳಿತ ಮಂಡಳಿ ವ್ಯಾಪ್ತಿಗೊಳಪಡುವ ಸ್ವಾಯತ್ತ ಸಂಸ್ಥೆಗಳು, ನಿಗಮ – ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಸರಕಾರ ದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳಿಗೆ ಕಳುಹಿಸಲಾಗಿದ್ದು, ಪಾಲಿಸುವಂತೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next