Advertisement

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದೇಶ

02:51 PM Aug 08, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆದೇಶಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾ
ರಾಯಣ ಸಹಿ ಮಾಡಿದ್ದಾರೆ.

Advertisement

ಉನ್ನತ ಶಿಕ್ಷಣ, ಐಟ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ತಮ್ಮ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್‌ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌ ಸೇರಿ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2021-22ನೇ ಸಾಲಿನಿಂದಲೇ ಜಾರಿ ಮಾಡುವ ಆದೇಶಕ್ಕೆ ಸಹಿ ಮಾಡಿದರು.

ಪ್ರಸಕ್ತ ವರ್ಷಕ್ಕೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಿ.ಎ.ಅಥವಾ ಬಿ.ಎಸ್ಸಿ ಪದವಿ ಅಧ್ಯಯನಕ್ಕೆ ಆಯಾ ಕಾಲೇಜುಗಳಲ್ಲಿ ಲಭ್ಯವಿರುವ ಎರಡು ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಮೂರನೇ ವರ್ಷದ ಆರಂಭದಲ್ಲಿ ಒಂದು ವಿಷಯವನ್ನು ಮೇಜರ್‌ ಆಗಿಯೂ, ಇನ್ನೊಂದು ವಿಷಯ ವನ್ನು ಮೈನರ್‌ ಆಗಿಯೂ ಅಥವಾ ಎರಡೂ ವಿಷಯಗಳನ್ನು ಮೇಜರ್‌ ಆಗಿ ಆಯ್ಕೆ ಮಾಡಿಕೊಂಡುಅಧ್ಯಯನ ಮಾಡಲುಅವಕಾಶ
ವಿದೆ. ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ಎರಡು ವಿಷಯಗಳ ಜತೆಗೆ, ಕನ್ನಡ ಮತ್ತು ಇನ್ನೊಂದು ಭಾಷಾ ವಿಷಯವನ್ನು,ಪ್ರೋಗ್ರಾಮ್‌
ವಿನ್ಯಾಸಕ್ಕೆ ಅನುಗುಣವಾಗಿ ಮುಕ್ತ ಆಯ್ಕೆಗಳು ಮತ್ತು ಬಹುಶಿಸ್ತೀಯ ಆಯ್ಕೆಗಳನ್ನು ಮಾಡಿಕೊಳ್ಳಬೇಕು. ಪಿಯುಸಿ ಅಥವಾ 10+2
ಹಂತದಲ್ಲಿ ಕನ್ನಡ ಕಲಿಯದವರಿಗೆ ಅಥವಾ ಕನ್ನಡ  ಮಾತೃ ಭಾಷೆಯಲ್ಲದವರಿಗೆ ಕನ್ನಡದ ಬೇರೆ ಪಠ್ಯಕ್ರಮ ರೂಪಿಸಿ ಬೋಧಿಸಲು ಅವಕಾಶ ನೀಡಲಾಗಿದ್ದು, ಮಾತೃಭಾಷೆ ಕಲಿಕೆಗೆ ಹೆಚ್ಚು ಮಹತ್ವ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ನೆಲ್ಲೂರು ಕೆಮ್ರಾಜೆ‌: ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಯೂ ಮೃತ್ಯು!

ವಿಷಯಾಧಾರಿತ ಪದವಿ ಅಧ್ಯಯನಗಳಿಗೆ (ಬಿ.ಕಾಂ, ಬಿಸಿಎ ಇತ್ಯಾದಿ) ಸಂಬಂಧಪಟ್ಟ ಹಾಗೆ ವಿಷಯಗಳನ್ನು ಬಹಶಿಸ್ತೀಯ ಆಯ್ಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ, ಅವರು ಕನ್ನಡ ಹಾಗೂ ಮತ್ತೊಂದು ಭಾಷೆ ಮತ್ತು ಪಠ್ಯಕ್ರಮಕ್ಕೆ ಅನುಗುಣವಾಗಿ ಮುಕ್ತ ಆಯ್ಕೆಗಳನ್ನು ಮತ್ತು ಬಹಶಿಸ್ತೀಯ ಆಯ್ಕೆಗಳನ್ನು ಮಾಡಿಕೊಳ್ಳಬೇಕು. ವಿದ್ಯಾರ್ಥಿಯು ಪ್ರಥಮ ವರ್ಷದಲ್ಲಿ ರಾಷ್ಟ್ರೀಯ ಕುಶಲತೆ ಅರ್ಹತಾ ಚೌಕಟ್ಟಿನ 5ನೇ ಹಂತದ
ನಿಗದಿತ ಪಠ್ಯವನ್ನು ‌ ಅಧ್ಯಯನ ಮಾಡಿ, ಅವಶ್ಯಕ ಅಂಕಗಳನ್ನುಗಳಿಸಿ ಕಾರಣಾಂತರಗಳಿಂದ ಅಧ್ಯಯನದಿಂದ ನಿರ್ಗಮಿಸಿದರೆ ‌ ಪ್ರಮಾಣ
ಪತ್ರವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಮಹಾವಿದ್ಯಾಲಯದಲ್ಲಿ ನಾಲ್ಕನೇ ವರ್ಷದ ಅಧ್ಯಯನ ಲಭ್ಯವಿದ್ದಲ್ಲಿ ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 8ನೇ ಹಂತದ ಅವರು ಆಯ್ಕೆ ಮಾಡಿದ ಐಚ್ಛಿಕ ವಿಷಯಗಳ ಅಧ್ಯಯನ ಮುಂದುವರೆಸಿ ಅಧ್ಯಯನ ಪೂರ್ಣಗೊಳಿಸಿದರೆ ಸ್ನಾತಕ ಹಾನರ್ಸ್‌ ಪದವಿ ನೀಡಲಾಗುವುದು ಎಂದು ವಿವರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next