Advertisement

ನಕ್ಸಲ್ ನಿಗ್ರಹ ದಳ ಸಿಬ್ಬಂದಿಗಳಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿ ಆದೇಶ

02:00 PM Feb 04, 2022 | Team Udayavani |

ಬೆಂಗಳೂರು: ನಕ್ಸಲ್ ನಿಗ್ರಹ ದಳ (ಎಎನ್ ಎಫ್) ಯೋಧರು ಹಾಗೂ ಆಂತರಿಕ ಭದ್ರತಾ ವಿಭಾಗ ದಲ್ಲಿ ಪ್ರಶಿಕ್ಷಣಾರ್ಥಿಗಳಾಗಿ, ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ, ನೀಡಲಾಗುತ್ತಿರುವ ವಿಶೇಷ ಆಹಾರ ಭತ್ಯೆ ದರವನ್ನು, ರೂಪಾಯಿ 130 ರಿಂದ 300 ರೂ ಗಳಿಗೆ ಹೆಚ್ಚಿಸಿ, ಸರಕಾರ ಆದೇಶ ಹೊರಡಿಸಿದೆ.

Advertisement

ಈ ಸಂಬಂಧ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಆಂತರಿಕ ಭದ್ರತಾ ವಿಭಾಗ, ಸರಕಾರಕ್ಕೆ ಸಲ್ಲಿಸಿದ್ದ ಕೋರಿಕೆಯನ್ನು ಪುರಸ್ಕರಿಸಿ, ವಿಶೇಷ ಆಹಾರ ಭತ್ಯೆಯನ್ನು ಪರಿಷ್ಕರಿಸಲಾಗಿದೆ.

ವಿಶೇಷ ಆಹಾರ ಹೆಚ್ಚುವರಿ ಭತ್ಯೆ, ಎ ಎನ್ ಎಫ್ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಆಂತರಿಕ ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ, ಸಿಸಿಟಿ ಮತ್ತು ಗರುಡ ಪಡೆಯ ಯೋಧರಿಗೂ ಅನ್ವಯವಾಗಲಿದೆ.

ನಿಮ್ಹಾನ್ಸ್ ಆಸ್ಪತ್ರೆಯ ಆಹಾರ ತಜ್ಞರು ಈಗಾಗಲೇ ನಿಗದಿಪಡಿಸಿರುವ 5600 kcal ನೀಡುವ ಪೌಷ್ಟಿಕ ಆಹಾರ ವನ್ನು, ಭದ್ರತಾ ಪಡೆಗಳಿಗೆ ಒದಗಿಸಲು ಸರಕಾರ ಹೊರಡಿಸಿರುವ ಈ ಆದೇಶ, ಸಹಕಾರಿಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next