Advertisement

ಚಿಕಿತ್ಸೆಗೆ ಹಣ ಬಿಡುಗಡೆ ಮಾಡುವಂತೆ ಆದೇಶ

11:05 PM Feb 24, 2020 | Lakshmi GovindaRaj |

ಬೆಂಗಳೂರು: ಮೆದುಳಿನ ಬೆಳವಣಿಗೆ ಕುಂಠಿತಗೊಳಿಸುವ ಜೊತೆಗೆ ಅಂಗಾಂಗ ವೈಫಲ್ಯಕ್ಕೆ ದಾರಿ ಮಾಡಿಕೊಡುವ ಲೈಸೋಸ್‌ಮಾಲ್‌ ಸ್ಟೋರೇಜ್‌ ಡಿಸೀಸ್‌(ಎಲ್‌ಎಸ್‌ಡಿ)ಕಾಯಿಲೆಯಿಂದ ಬಳಲು ತ್ತಿರುವ 27 ಮಕ್ಕಳ ಚಿಕಿತ್ಸೆಗೆ ಸರ್ಕಾರ ನಾಲ್ಕು ತಿಂಗಳಲ್ಲಿ ನಾಲ್ಕು ಕಂತುಗಳಲ್ಲಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 5.95 ಕೋಟಿ ಹಣ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ನೀಡಿದೆ.

Advertisement

ಈ ಕುರಿತಂತೆ ‘ಲೈಸೋಸ್‌ಮಾಲ್‌ ಸ್ಟೋರೇಜ್‌ ಡಿಸಾರ್ಡರ್ ಸೊಸೈಟಿ ಆಫ್‌ ಇಂಡಿಯಾ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಮಧ್ಯಂತರ ಆದೇಶ ನೀಡಿದೆ.

ಅದರಂತೆ, ಮಾರ್ಚ್‌ನಿಂದ ಜೂನ್‌ವರೆಗೆ ನಾಲ್ಕು ತಿಂಗಳಲ್ಲಿ ಪ್ರತಿ ತಿಂಗಳು 1.25 ಕೋಟಿಯಂತೆ ನಾಲ್ಕು ಕಂತುಗಳಲ್ಲಿ 5.95 ಕೋಟಿ ರೂ. ಹಣ ಬಿಡಗಡೆ ಮಾಡಬೇಕು. ಮೊದಲ ಕಂತು ಮಾ.5 ರೊಳಗೆ ಬಿಡುಗಡೆಯಾಗಬೇಕು. ಆಸ್ಪತ್ರೆ ಆ ಹಣವನ್ನು ಬಳಸಿಕೊಂಡು ಕಾಯಿಲೆ ಯಿಂದ ಬಳಲುತ್ತಿರುವ ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಹೆಚ್ಚಿನ ಅನುದಾನ ಬೇಕಿದ್ದರೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್‌, ಆ ಮನವಿಯನ್ನು ಕೇಂದ್ರ ಸರ್ಕಾರ ನಾಲ್ಕು ತಿಂಗಳಲ್ಲಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿತು. ಈ ಆದೇಶ ಪಾಲನೆಯ ವರದಿಯನ್ನು ಮಾ.30ರೊಳಗೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಏ.1ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next