Advertisement

ಹಿಜಾಬ್ ವಿವಾದ-ಶಾಲೆಗಳಲ್ಲಿ ಆದೇಶ ಉಲ್ಲಂಘನೆ: ಯು.ಟಿ. ಖಾದರ್ ಆರೋಪ

02:51 PM Feb 15, 2022 | Team Udayavani |

ಬೆಂಗಳೂರು : ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಫ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಉಲ್ಲಂಘಿಸಲಾಗುತ್ತಿದೆ ಎಂದು ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಆರೋಪಿಸಿದ್ದಾರೆ.

Advertisement

ಇದನ್ನೂ ಓದಿ:ಹಿಜಾಬ್ ಗಲಾಟೆ ಹಿಂದೆ ಕಾಂಗ್ರೆಸ್ ಸೇರಿದಂತೆ ಕೆಲವರ ಕುಮ್ಮಕ್ಕು ಇದೆ: ಸಚಿವ ಪ್ರಹ್ಲಾದ್ ಜೋಶಿ

ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಕಾಲೇಜು ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರ ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಸ್ಪಷ್ಡವಾಗಿದರ. ಆದರೆ ಪ್ರೌಢ ಹಾಗೂ ಪ್ರಾಥಮಿಕ ಶಾಲೆಯಲ್ಲೂ ಹಿಜಾಬ್ ತೆಗೆದು ಬರುವಂತೆ ಸೂಚನೆ ನೀಡಲಾಗುತ್ತಿದೆ.

ಶಾಲಾ ಸಿಬ್ಬಂದಿಗೂ ಈ ನಿಯಮ ಅನ್ವಯ ಮಾಡುತ್ತಿದ್ದಾರೆ.‌ಇದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಸರಕಾರ ಈ ಬಗ್ಗೆ ತಕ್ಷಣ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಸದನ ದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಪಸ್ಥಿತಿ ಹಿನ್ನೆಲೆಯಲ್ಲಿ ಉತ್ತರ ನೀಡಿದ ಸಂಸದೀಯವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಸರಕಾರ ಹೈಕೋರ್ಟ್ ಆದೇಶ ಪಾಲಿಸುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಚರ್ಚೆಗೆ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರೂ ಸ್ಪೀಕರ್ ಕಾಗೇರಿ ನಿರಾಕರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next