Advertisement

ವೇತನ ಸಹಿತ ರಜೆ ಮಂಜೂರಿಗೆ ಆದೇಶ 

06:00 AM May 09, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 12ರಂದು ಮತದಾನ ನಡೆಯುತ್ತಿರುವುದರಿಂದ ಅಂದು ಅಧಿಕಾರಿಗಳು, ನೌಕರರು ಸೇರಿ ಎಲ್ಲ ಸಿಬ್ಬಂದಿಗೆ ವೇತನ ಸಹಿತ ರಜೆ ಮಂಜೂರು ಮಾಡುವಂತೆ ಎಲ್ಲ ಕಾರ್ಖಾನೆ ಮತ್ತು ಕೈಗಾರಿಕೆ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿ ಕೈಗಾರಿಕಾ ಇಲಾಖೆ ಆದೇಶ ಹೊರಡಿಸಿದೆ. ಕಾರ್ಖಾನೆ ಮತ್ತು ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಬೇಕಾದ್ದು ಆಡಳಿತ ವರ್ಗದ ಕರ್ತವ್ಯ. ಈ ಹಿನ್ನೆಲೆಯಲ್ಲಿ ಮೇ 12ರಂದು ನಡೆಯುವ ಮತದಾನದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗಲು ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next