Advertisement
ಸರ್ಕಾರ ಶಾಲೆಗಳು ಪ್ರಾರಂಭವಾಗಿರುವು ದರಿಂದ ಗ್ರಾಪಂ ವ್ಯಾಪ್ತಿಯಲ್ಲಿ ಮಕ್ಕಳ ಹಕ್ಕು ಗಳು ಹಾಗೂ ಶಾಲೆಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳಲು ಗ್ರಾಮಸಭೆಯನ್ನು ಆಯೋಜಿಸಿತ್ತು. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಪ್ರತಿ ಗ್ರಾಪಂ ಮಟ್ಟದಲ್ಲಿ ಮಕ್ಕಳ ಗ್ರಾಮಸಭೆಗಳನ್ನು ಆಯೋಜಿಸಿ ಮಕ್ಕಳ ಆತ್ಮಸ್ಥೆ çರ್ಯ ವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ.
Related Articles
Advertisement
ಮಕ್ಕಳಿಗೆ ವಿಶೇಷ ಗ್ರಾಮಸಭೆ: ಗ್ರಾಪಂಗಳು ಮತ್ತು ಶೈಕ್ಷಣಿಕಾಭಿವೃದ್ಧಿ ಸಂಸ್ಥೆಯು ಜಂಟಿಯಾಗಿ ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ಈ ವರ್ಷ ಎಲ್ಲಾ ಗ್ರಾಪಂಗಳಲ್ಲಿ ಕಡ್ಡಾಯವಾಗಿ ನಡೆಸಲು ಈಗಾಗಲೇ ಸುತ್ತೋ ಲೆ ಯನ್ನು ಹೊರಡಿಸಿದೆ. ಕಳೆದ 8 ವರ್ಷಗಳಿಂದ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಮಕ್ಕಳ ಹಕ್ಕುಗಳ ವಿಶೇ ಷ ಗ್ರಾಮ ಸಭೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಅನುಭವವನ್ನು ಹೊಂದಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಪಂಗಳಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಲು ಆದೇಶವಿದ್ದು, ಈ ಹಿಂದಿನ ಸಾಲಿನಲ್ಲಿ ಗ್ರಾಮಸಭೆ ನಡೆದಿರದ ಕಾರಣ ಈ ಬಾರಿ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಸಿಗುವ ಹಾಗೂ ಗ್ರಾಮ ಸಭೆಗಳು ಮುಂದು ವರಿಸಿಕೊಂಡು ಹೋಗುವ ನಿರೀಕ್ಷೆ ಇದೆ.
ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನದಲ್ಲಿ ಏನಿರುತ್ತೇ?
ಮಕ್ಕಳ ಜನನ ನೊಂದಣಿ ಮತ್ತು ಜನನ ಪ್ರಮಾಣ ಪತ್ರಗಳ ವಿತರಣೆ
ಪೌಷ್ಟಿಕ ಆಹಾರ ಕುರಿತು ಮಾರ್ಗದರ್ಶನ
ಮಕ್ಕಳಿಗೆ ಚುಚ್ಚುಮದ್ದು ಪ್ರಾಮುಖ್ಯತೆ ಅರಿವು
ಮಕ್ಕಳ ಕ್ರೀಡಾಕೂಟ, ಸಾಂಸ್ಕೃತಿಕ ಮತ್ತು ಸ್ಥಳೀಯ ಸಾಂಪ್ರದಾಯಿಕ ಚಟುವಟಿಕೆಗಳು
ಮಕ್ಕಳ ಕಥೆ ಹೇಳುವುದು, ಜನಪದ ಗೀತೆಗಳು ಮತ್ತು ರಂಗಭೂಮಿ ಕಾರ್ಯಕ್ರಮಗಳು
ಮಾನಸಿಕ ಆರೋಗ್ಯ ಸಂಬಂತ ಕಾರ್ಯಕ್ರಮಗಳು
ಶೈಕ್ಷಣಿಕ ಮತ್ತು ವೃತ್ತಿಪರ ಮಾರ್ಗದರ್ಶನ ಕಾರ್ಯಕ್ರಮ
ಚಿತ್ರಕಲೆ ಕಾರ್ಯಕ್ರಮ
ಮಕ್ಕಳ ವಿಶೇಷ ಗ್ರಾಪಂ ಸಭೆಯಲ್ಲಿ ಏನಿರುತ್ತೇ?
ಗ್ರಾಪಂ ಮಕ್ಕಳ ಹಕ್ಕುಗಳ ರಕ್ಷಣೆ ಫೇಸ್‌ಬುಕ್ ಪೇಜ್
ಮಕ್ಕಳ ಸಮಸ್ಯೆಗಳ, ಬೇಡಿಕೆಗಳ, ಪ್ರಶ್ನೆಗಳ ಮಕ್ಕಳ ಧನಿ (ಸಹಾಯವಾಣಿ 1098)ಪೆಟ್ಟಿಗೆ
ಜನನ ನೊಂದಣಿ ಪ್ರಮಾಣ ಪತ್ರ, ಪೌಷ್ಠಿಕ ಆಹಾರ, ಚುಚ್ಚುಮದ್ದು, ಶಾಲಾ ದಾಖಲಾತಿ, ಬಾಲ್ಯ ವಿವಾಹ ಪ್ರಕರಣ
ಹೆಣ್ಣು ಮಕ್ಕಳಿಗೆ ಶಿಕ್ಷಣ, ಮಕ್ಕಳ ಜೀತ ಪದ್ಧತಿ ಮುಕ್ತತೆ, ಮಕ್ಕಳ ಸುರಕ್ಷತೆ, ಶಿಶುಮರಣ ಪ್ರಮಾಣ ತಗ್ಗಿಸುವ ಜಾಗೃತಿ ಕಾರ್ಯಕ್ರಮಗಳು
“ಜಿಲ್ಲಾದ್ಯಂತ ಮತ್ತು ತಾಲೂಕಾದ್ಯಂತ ನ.14ರಿಂದ ಪ್ರತಿ ಗ್ರಾಪಂಗಳಲ್ಲಿ ಕಡ್ಡಾಯವಾಗಿ ಮಾಡಲು ಆದೇಶ ಇರುತ್ತದೆ. ಗ್ರಾಪಂ ಹಂತದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು. ಅವರ ಸಮಸ್ಯೆಗಳಿಗೆ, ಶಾಲೆಗಳಲ್ಲಿ ದೌರ್ಜನ್ಯ, ಪೋಷಕರ ಹಿನ್ನೆಲೆ, ಹೀಗೆ ಹಲವಾರು ರೀತಿಯ ಸಮಸ್ಯೆಗಳಿಗೆ ಧನಿಗೂಡಿಸಿ ಪರಿಹಾರ ಕೊಡಿಸುವ ಸರ್ಕಾರದ ಮಹತ್ವದ ಕಾರ್ಯಕ್ರಮ ಇದಾಗಿದೆ. ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿ ಗ್ರಾಪಂಗಳಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯನ್ನು ಮಾಡಲಾಗುತ್ತದೆ.” – ಎಚ್.ಡಿ.ವಸಂತ್‌ಕುಮಾರ್, ತಾಪಂ ಇಒ