Advertisement
ಜಿಲ್ಲಾಡಳಿತ ಭವನದ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 483 ಶುದ್ಧ ನೀರಿನ ಘಟಕಗಳಿದ್ದು, 448 ಘಟಕಗಳು ಕಾಯನಿರ್ವಹಿಸುತ್ತಿದ್ದು, 35 ಸ್ಥಗಿತಗೊಂಡಿರುವ ಕುರಿತು ಚರ್ಚೆಯಲ್ಲಿ ಭಾಗವಹಿಸಿದ ಶಾಸಕ ಎಚ್.ಕೆ. ಪಾಟೀಲ, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಘಟಕಗಳ ಕುರಿತು ನಿಗದಿತವಾಗಿ ಪರಿಶೀಲಿಸಿ ನಿರ್ವಹಣೆ ನಡೆಯಾಗಬೇಕು ಎಂದರು. ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಘಟಕಗಳ ನಿರ್ವಹಣೆಯನ್ನು ಇಲಾಖೆ ಬದಲಾಗಿ ಅರ್ಹ ಏಜೆನ್ಸಿಗೆ ವಹಿಸಬೇಕು ಎಂದು ಸಲಹೆ ನೀಡಿದರು.
Related Articles
Advertisement
ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲೆಯಿಂದ ಹೊರಗುಳಿದ 388 ಮಕ್ಕಳನ್ನು ಶಾಲೆಗೆ ಪುನಃ ಕರೆತರುವ, ಜಿಲ್ಲೆಯ 280 ಶಾಲೆಗಳ 770 ಶಾಲಾ ಕೊಠಡಿಗಳಿಗೆ ಹಾನಿಯಾಗಿದ್ದು, 5 ಕೋಟಿ ಅನುದಾನ ಬಿಡುಗಡೆ ಆಗಿದೆ. ರಾಜ್ಯ ಸರಕಾರದ ನಿರ್ದೇಶನದಂತೆ ಅವುಗಳ ದುರಸ್ತಿ ಕೈಗೊಳ್ಳಲು ಶಾಲಾ ಅಭಿವೃದ್ಧಿ ಸಮಿತಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಪಶುಸಂಗೋಪನೆ ಇಲಾಖೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆ ತುಂಬಲು ನಿವೃತ್ತ ಅಧಿಕಾರಿ ಸಿಬ್ಬಂದಿಯ ಪಟ್ಟಿ ತಯಾರಿಸಿ, ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಕ್ರಮ ಜರುಗಿಸಲು ಸಚಿವ ಸಿ.ಸಿ.ಪಾಟೀಲ ಸೂಚಿಸಿದರು. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ 32 ಲಕ್ಷ ಮಾನವ ದಿನಗಳ ಗುರಿ ಪೈಕಿ ಈ ವರೆಗೆ 24.50 ಲಕ್ಷ ಮಾನವ ದಿನ ಸೃಜಿಸಲಾಗಿದೆ ಎಂದು ಜಿ.ಪಂ ಸಿಇಒ ತಿಳಿಸಿದರು. ಜಿಪಂ ಜಾರಿಗೊಳಿಸುವ ಗ್ರಾಮವಿಕಾಸ, ನಮ್ಮ ಹೊಲ ನಮ್ಮ ದಾರಿ, ಮುಂತಾದ ಜನಪರ ಯೋಜನೆಗಳ ಮಾಹಿತಿ ಈಗಿರುವ ವಿಧಾನದಲ್ಲಿ ಇಲ್ಲಿ ಗ್ರಾಮವಿಕಾಸ ಯೋಜನೆಯು ಗ್ರಾಮಗಳಲ್ಲಿ ಕೆಲಸ ನಿಂತಿರುವ ದೂರುಗಳಿವೆ ತಕ್ಷಣವೇ ಈ ಕುರಿತು ಪರಿಶೀಲನೆ ನಡೆಸಿ ವಾಸ್ತವ ವರದಿ ನೀಡಲು ಜಿ.ಪಂ. ಸಿಇಒ ಆನಂದ ಅವರಿಗೆ ಸೂಚಿಸಲಾಯಿತು.
ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಎಚ್. ಪಾಟೀಲ, ಶಾಸಕರ ರಾಮಣ್ಣ ಲಮಾಣಿ, ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಹನುಮಂತಪ್ಪ ಪೂಜಾರ, ಈರಪ್ಪ ನಾಡಗೌಡ್ರ, ಶಿವಕುಮಾರ ನೀಲಗುಂದ ವೇದಿಕೆ ಮೇಲಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮುಖ್ಯಸ್ಥರು, ಗದಗ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಸಭೆಯಲ್ಲಿ ಭಾಗವಹಿಸಿದ್ದರು.