Advertisement
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನ ಮತ್ತು ದೆಹಲಿ ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಹಾಗೂ ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿಯನ್ನು ಸಲ್ಲಿಸಿದ್ದರು. ಸರ್ವೋಚ್ಚ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಮತ್ತು ನ್ಯಾ.ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠವು ಈ ಸಲ್ಲಿಕೆಗಳನ್ನು ಆಲಿಸಿದೆ. ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಹಾಜರಾಗಿ ವಾದ ಮಂಡಿಸಿದ್ದಾರೆ.
ಇದೇ ವೇಳೆ ದೆಹಲಿ ವಿದ್ಯುತ್ ನಿಯಂತ್ರಣ ಆಯೋಗ (ಡಿಇಆರ್‌ಸಿ)ದ ಅಧ್ಯಕ್ಷರ ನೇಮಕ ವಿಚಾರದಲ್ಲೂ ಕೇಂದ್ರ ಹಾಗೂ ದೆಹಲಿಯ ಆಡಳಿತಾರೂಢ ಆಪ್ ಸರ್ಕಾರದ ಜಿದ್ದಾಜಿದ್ದಿ ಬಗ್ಗೆ ಸುಪ್ರೀಂಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಯಾರಲ್ಲೂ ಸಂಸ್ಥೆಯ ಬಗ್ಗೆ, ವ್ಯವಸ್ಥೆ ಬಗ್ಗೆ ಕಾಳಜಿ ಇಲ್ಲ. ಬದಲಾಗಿ ಕಾದಾಟಕ್ಕೆ ಮುಂದಾಗಿದ್ದಾರೆಂದು ಹೇಳಿದೆ. ಡಿಇಆರ್‌ಸಿ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಸಂಗೀತ್ ಲೋಧಾ ಅವರನ್ನು ಸಿಎಂ ಕೇಜ್ರಿವಾಲ್ ಶಿಫಾರಸು ಮಾಡಿದ್ದರು. ಆದರೆ, ಕೇಂದ್ರ ಸರ್ಕಾರವು ಅಲಹಬಾದ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳನ್ನು ಡಿಇಆರ್‌ಸಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದ್ದು, ಇದನ್ನೂ ಪ್ರಶ್ನಿಸಿ ಆಪ್ ಸರ್ಕಾರ ಸುಪ್ರೀಂ ಮೆಟ್ಟಿಲೇರಿದೆ