Advertisement
ಗ್ರಾಮದ ಕವನ ಮಳ್ಳಯ್ಯ ಹಿರೇಮಠ (20) ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿ ಎನಿಸಿಕೊಂಡಿದ್ದಾಳೆ. ಹಳ್ಳೂರ ಗ್ರಾಮದ ಕವನ ಹಿರೇಮಠ ಶಿಕಾರಿಪುರದ ಗಾರ್ಮೆಂಟ್‌ವೊಂದರಲ್ಲಿ ಕೆಲಸ ಮಾಡು ತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರ ಗ್ರಾಮದ ಬಳಿ ಓಮಿನಿ- ಚಕ್ಕಡಿ ಗಾಡಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರವಾಗಿ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಕೋಮಾ ಸ್ಥಿತಿಗೆ ತಲುಪಿದ್ದರು. ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗಳಂತೂ ಇನ್ನು ಬದುಕಲ್ಲ, ಅವಳ ಅಂಗಾಂಗವಾ ದರೂ ಇತರರಿಗೆ ಬದುಕು ನೀಡಲಿ ಎಂದು ನಿರ್ಧರಿಸಿದ ಆಕೆಯ ಕುಟುಂಬಸ್ಥರು ವೈದ್ಯರೊಂದಿಗೆ ಚರ್ಚಿಸಿದರು.
Advertisement
ಅಪಘಾತದಲ್ಲಿ ಮೆದುಳು ನಿಷ್ಕ್ರಿಯ; ಪುತ್ರಿಯ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
01:41 PM Sep 15, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.