ಮೈಸೂರು: ರೈತರ ಅನುಕೂಲಕ್ಕಾಗಿ ನಗರದ ಕೃಷಿ ಮಾರಾಟ ಅಧ್ಯಯನ ಸಂಸ್ಥೆಯಲ್ಲಿ ಆಯೋಜಿಸಿದ್ದ ಸಾವಯವ ಮಾವು ಮೇಳ ಹಾಗೂ ಸಾವಯವ ಕೃಷಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಪ್ರಾಂತೀಯ, ಸಹಕಾರ ಸಾವಯವ ಕೃಷಿಕ ಸಂಘಗಳ ಒಕ್ಕೂಟ ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಪ್ರಾಂತೀಯ ಸಹಕಾರ ಒಕ್ಕೂಟ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಹಾಗೂ ಆಕಾಶವಾಣಿ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಸಾವಯವ ಮಾವು ಮೇಳದಲ್ಲಿ ಮೈಸೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ರೈತರು ಭಾಗವಹಿಸಿದ್ದರು.
ಸಾವಯವ ಮಾವು ಮೇಳದಲ್ಲಿ ತೋತಾಪುರಿ, ರಾಜಗೀರಾ, ಸಿಂಧೂರ, ನೀಲಂ, ಬೈಗಾನ್‌ಪಲ್ಲಿ, ಬೇನಿಷಾ, ಆಲಾ ನ್ಸೋ, ಬಾದಾಮಿ, ರತ್ನಗಿರಿ, ರಸಪೂರಿ, ಸಕ್ಕರೆ ಲಡ್ಡು, ಕಾಲಾಪಹಾಡ್, ಮಲ್ಲಿಕಾ, ಮಲಗೋವಾ ಸೇರಿದಂತೆ ವಿವಿಧ ಹಣ್ಣುಗಳು ಮಾರಾಟ ಮತ್ತು ಪ್ರದರ್ಶನಕ್ಕಿಡಲಾಗಿದೆ.
ರಾಸಾಯನಿಕ ಸಿಂಪಡಿಸದ ಮಾವಿನ ಹಣ್ಣು ಮತ್ತು ಸಾವಯವ ಉತ್ಪನಗಳನ್ನು ಕಡಿಮೆ ವೆಚ್ಚದಲ್ಲಿ ರೈತರಿಂದ ನೇರ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದೆ. ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗದ ರೈತರು ನೈಸರ್ಗಿಕವಾಗಿ ಬೆಳದ ಉತ್ಪನ್ನಗಳಿವೆ. ಇದೇ ವೇಳೆ ಮೈಸೂರು, ಮಂಡ್ಯ, ಚಾಮರಾಜನಗರ ಪ್ರಾಂತೀಯ ಒಕ್ಕೂಟದ ಪ್ರಮಾಣೀಕೃತ ಸಿರಿಧಾನ್ಯಗಳ, ಸಾವಯವ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಕೋಲಾರ ಚಿಕ್ಕಬಳ್ಳಾಪುರ ಪ್ರಾಂತೀಯ ಸಹಕಾರ ಒಕ್ಕೂಟ ಅಧ್ಯಕ್ಷ ಕೆ.ವಿ.ರೆಡ್ಡಪ್ಪ, ಆಕಾಶವಾಣಿ ಸಹಾಯಕ ನಿರ್ದೇಶಕ ಎಚ್.ಶ್ರೀನಿವಾಸ್, ಕೃಷಿ ಮಾರಾಟ ಅಧ್ಯಯನ ಸಂಸ್ಥೆಯ ಪ್ರಾಂಶುಪಾಲ ಡಾ.ರತ್ನಮ್ಮ, ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕ ನಂಜುಂಡಸ್ವಾಮಿ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಎನ್.ಕೇಶವಮೂರ್ತಿ ಮತ್ತಿತರರು ಹಾಜರಿದ್ದರು.