Advertisement

ಸಾವಯವ ಮತ್ತು ಸಿರಿಧಾನ್ಯ ಮೇಳ

03:52 PM Mar 25, 2017 | |

ಸಾವಯವ ಉತ್ಪನ್ನಗಳ ಹಾಗೂ ಸಣ್ಣ ಸಿರಿಧಾನ್ಯಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೃಷಿ ಇಲಾಖೆ, ಜೈವಿಕ್‌ ಕೃಷಿಕ್‌ ಸೊಸೈಟಿ ಸಹಯೋಗದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳವನ್ನು ಆಯೋಜಿಸಿದೆ. ರೈತರು ತಾವು ಬೆಳೆದ ಗುಣಮಟ್ಟದ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳನ್ನು ನೋಂದಾಯಿತ ಸಂಘಗಳ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಈ ಮೇಳ ಅನುವು ಮಾಡಿಕೊಡಲಿದೆ. ಇದರಿಂದ ಗ್ರಾಹಕರು ವಿವಿಧ ರೀತಿಯ ಸಾವಯವ ಮತ್ತು ಸಿರಿಧಾನ್ಯ ಪದಾರ್ಥಗಳನ್ನು ಒಂದೇ ಸ್ಥಳದಲ್ಲಿ ಖರೀದಿಸಬಹುದಾಗಿದೆ.

Advertisement

 ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಸಾಂಖೀಕ ಮತ್ತು ಕಾರ್ಯಕ್ರಮದಲ್ಲಿ ಅನುಷ್ಠಾನ ಸಚಿವರಾದ ಡಿ. ವಿ. ಸದಾನಂದ ಗೌಡ, ಮಾನ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮೇಳದಲ್ಲಿ ಉದಲು ಪಿಜ್ಜಾ, ರಾಗಿ ಕೇಕ್‌, ಬರಗು ಸಮೋಸ, ಸಾಮೆ ಅಣಬೆ ಬಿರಿಯಾನಿ, ನವಣೆ ಕಟ್‌ಲೆಟ್‌, ನವಣೆ ಬ್ರೆಡ್‌, ಜೋಳದ ಜೀರಾ ಲಸ್ಸಿ, ನವಣೆ ಪೊಂಗಲ್‌, ಹಾರಕ ಬಿಸಿಬೇಳೆಬಾತ್‌, ಸಾಮೆ ಪಾಯಸ, ಸಜ್ಜೆ ರೊಟ್ಟಿ, ಸಾಮೆ ಚೌಚೌ ಬಾತ್‌ ಸೇರಿದಂತೆ ಹಲವು ಖಾದ್ಯಗಳನ್ನು ಸವಿಯಬಹುದಾಗಿದೆ. ಇದರ ಜೊತೆಗೆ ಸಿರಿಧಾನ್ಯಗಳ ಖಾದ್ಯ ತಯಾರಿಕಾ ಪ್ರಾತ್ಯಕ್ಷಿಕೆ ಮತ್ತು ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯೂ ಏರ್ಪಾಡಾಗಿದೆ.

 ಎಲ್ಲಿ?: ಮಲ್ಲೇಶ್ವರಂ ಆಟದ ಮೈದಾನ(ಸರಕಾರಿ ಮಾದರಿ ಪ್ರಾಥಮಿಕ ಶಾಲೆ)

ಯಾವಾಗ?: ಮಾರ್ಚ್‌ 25 ಮತ್ತು 26, ಬೆಳಗ್ಗೆ 9ರಿಂದ ಸಂಜೆ 6. 30
ಪ್ರವೇಶ: ಉಚಿತ

Advertisement

Udayavani is now on Telegram. Click here to join our channel and stay updated with the latest news.

Next