ಯಾದಗಿರಿ: ಸಂಘ ಸಂಸ್ಥೆಗಳಲ್ಲಿ ಅಸಮಾಧಾನಗಳಿಗೆ ಆಸ್ಪದ ನೀಡದೆ ಎಲ್ಲರೂ ಒಂದೇ ಭಾವನೆಯಿಂದ ಒಗ್ಗಟ್ಟಾಗಿ ಶ್ರಮಿಸಿದಾಗ ಮಾತ್ರ ಸಮಾಜದಲ್ಲಿ ಸಂಘ ಸಂಸ್ಥೆಗಳು ಪ್ರಗತಿ ಸಾಧಿಸಲು ಸಾಧ್ಯ ಎಂದು ವೀರಶೈವ ಸಮಾಜದ
ನಗರ ಘಟಕದ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನೂತನ ವರ್ಷದ ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಸಂಘ-ಸಂಸ್ಥೆಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಬೇಕು. ಸಂಸ್ಥೆ ಅಭಿವೃದ್ಧಿ ಜೊತೆಗೆ ಸಮಾಜದ ಪ್ರಗತಿಗೆ ಅನೇಕ ಕಾರ್ಯಕ್ರಮ ಆಯೋಜಿಸಬೇಕು ಎಂದರು.
ಸಂಘದ ಪದಾಧಿಕಾರಿಗಳಾದ ಸೂಗಪ್ಪ ಪಾಟೀಲ, ಗುರುನಾಥರಡ್ಡಿ ಹತ್ತಿಕುಣಿ ಮಾತನಾಡಿ, ಒಗ್ಗಟ್ಟಿನಲ್ಲಿ ಬಲವಿದೆ ಎಂದು ಹೇಳಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಸಿದ್ದಗಂಗಾ ಶ್ರೀಗಳಿಗೆ ಕೇಂದ್ರ ಸರಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ ಭವನಕ್ಕೆ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ ಅನುದಾನದಲ್ಲಿ 5 ಲಕ್ಷ ರೂ. ಅನುದಾನ ಒದಗಿಸಲು ಶ್ರಮಿಸಿದ ಅಶೋಕ ಕೆಂಭಾವಿ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷ ಶಶಿಕಾಂತ ಕಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಬಸವಂತರಾಯಗೌಡ ಮಾಲಿ ಪಾಟೀಲ, ಚೆನ್ನಪ್ಪ ಸಾಹು, ದೇವಿಂದ್ರ ಯಡ್ಡಳ್ಳಿ, ನೀಲಕಂಠ ಶೀಲವಂತ, ನಾಗೇಂದ್ರ ಜಾಜಿ, ರಾಜಶೇಖರ ಕೊಳ್ಳಿ, ಬಂದಪ್ಪ ಐರಡ್ಡಿ, ಡಾ| ಅಯ್ಯಣ್ಣ ಗೌಡ, ವಿಜಯಕುಮಾರ, ಪ್ರಭು ಗುಣಾದಿ, ಮಲ್ಲಣ್ಣಗೌಡ, ನಾಗರಾಜ, ನಾಗಪ್ಪ ಇದ್ದರು.