ಸಂಘಟನೆಗಳ ಕಾರ್ಯಕರ್ತರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೆಂಡಾಲ್ ನಿರ್ಮಿಸಬೇಕು. ಯುವಕರು ಶಾಂತಿಯಿಂದ ವರ್ತಿಸಿದರೆ ಯಾವುದೇ ಅಹಿತಕರ ಘಟನೆ ನಡೆಯುವುದಿಲ್ಲ. ಈ ಬಗ್ಗೆ ಸ್ಥಳೀಯ ಮುಖಂಡರು ಯುವಕರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಬಲವಂತವಾಗಿ ಸಾರ್ವಜನಿಕರಿಂದ ಹಬ್ಬ ಹಣವಸೂಲಿ ಮಾಡುತ್ತಿರುವ ಮಾಹಿತಿ ಸಿಕ್ಕರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ಈ ರೀತಿ ಯಾರಾದರೂ ವರ್ತಿಸಿದರೆ ಸಾರ್ವಜನಿಕರು ಕೂಡಲೇ ನಮ್ಮ-100ಕ್ಕೆ ದೂರು ನೀಡಬಹುದು ಎಂದು ಹೇಳಿದರು. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ವಿಷಯದಲ್ಲಿ ಕಾಲಮಿತಿ ಸಡಿಲಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ವಿಷಯವಾಗಿ ಕಾಲಮಿತಿ ಕಡಿಮೆಗೊಳಿಸುವ ಬಗ್ಗೆ ಚಿಂತಿಸಲಾಗಿತ್ತು. ಗಣೇಶ ಪ್ರತಿಷ್ಠಾಪನೆ ಆಯೋಜಕರು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಬಕ್ರೀದ್ ಮತ್ತು ಗಣಪತಿ ಹಬ್ಬದ ಸಂದರ್ಭದಲ್ಲಿ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿಗೆ ಪ್ರತಿ ವಾರ್ಡ್‌ಗಳಲ್ಲಿ ಕ್ರಮಕೈಗೊಳ್ಳಲಾಗಿದೆ. ವೈಜ್ಞಾನಿಕವಾಗಿ ಕರಗಿಸಲು ನಿರ್ದಿಷ್ಟ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಕೊಡಿ: ಶ್ರೀರಾಮಪುರ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲ ವರ್ಷಗಳಿಂದ ಗಣೇಶ ಹಬ್ಬದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅವಕಾಶ ಸಿಗುತ್ತಿಲ್ಲ ಎಂದು ವ್ಯಕ್ತಿಯೊಬ್ಬರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮ ಪಾಲನೆ ಮಾಡಿ ಹಬ್ಬ ಆಚರಿಸಿ ಇದಕ್ಕೆ ಪೊಲೀಸರಿಂದ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಭರವಸೆ ನೀಡಿದರು.