Advertisement

ಬೀದಿ ಬದಿ ವ್ಯಾಪಾರಿಗಳಿಗೆ ಸಾಲಮೇಳ ಆಯೋಜಿಸಿ

03:39 PM Mar 15, 2021 | Team Udayavani |

ಹಾವೇರಿ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆಸಾಲಮೇಳ ಆಯೋಜಿಸಿ ಅರ್ಹರಿಗೆ ನೆರವುಒದಗಿಸಬೇಕೆಂದು ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆ ನಡೆಸಿದ ಅವರು, ಸಾಲಮೇಳ ಆಯೋಜನೆಯಿಂದ ಬೀದಿಬದಿ ವ್ಯಾಪಾರಿಗಳಿಗೆ ಹಣಕಾಸಿನ ನೆರವು ಒದಗಿಸಿ ಸ್ವಾವಲಂಬಿ ಜೀವನಕ್ಕೆ ಉತ್ತೇಜನ ನೀಡಬೇಕೆಂದು ತಿಳಿಸಿದರು.

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳು ಬಾಕಿ ಇರುವ ನೀರಿನಕರ, ವಾಣಿಜ್ಯ ಮಳಿಗೆಗಳ ಬಾಡಿಗೆ,ಜಾಹೀರಾತು ಕರಗಳನ್ನು ವಸೂಲಿ ಮಾಡಲುಮುಂದಾಗಬೇಕು. ಮಳಿಗೆಗಳ ಬಾಕಿ ಬಾಡಿಗೆ ಪಾವತಿಸಲು ಕಂತಿನಲ್ಲಿ ಅವಕಾಶ ನೀಡಬೇಕು ಎಂದು ಸೂಚಿಸಿದರು.

ನಗರ ಪ್ರದೇಶದಲ್ಲಿ ಪರವಾನಗಿ ನೀಡುವುದು ಹಾಗೂ ಪರವಾನಗಿ ನವೀಕರಣ ಕೆಲಸವನ್ನು ಸೋಮವಾರದಿಂದ ಅಭಿಯಾನದ ರೀತಿಯಲ್ಲಿ ಆಯೋಜಿಸಿ, ಸ್ಥಳದಲ್ಲಿಯೇ ರಶೀದಿ ನೀಡಲು ಆಯಾ ಬ್ಯಾಂಕ್‌ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ವಾಣಿಜ್ಯ ಮಳಿಗೆಗಳ ಪ್ರದೇಶದಲ್ಲಿ ಕೌಂಟರ್‌ ಸ್ಥಾಪಿಸಿ, ಕಚೇರಿಯನ್ನು ಜನರ ಬಳಿ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು. ಉಳಿತಾಯ ಹಣದಲ್ಲಿ ಸೂಕ್ತ ಕ್ರಿಯಾ ಯೋಜನೆಗಳನ್ನು ರೂಪಿಸಿ ನಗರದಲ್ಲಿ ಜನರಿಗೆ ಅನುಕೂಲಕರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿವಿಧ ಯೋಜನೆಗಳಡಿ ಮಂಜೂರಾದ ಹಣವನ್ನು ನಿಗದಿತ ಅವಧಿಯೊಳಗೆ ವೆಚ್ಚ ಮಾಡಿ ಗುರಿ ಸಾಧಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಿಸುವನಿಟ್ಟಿನಲ್ಲಿ ಕಾರ್ಯಕಮ ರೂಪಿಸಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next