Advertisement

ಭಿನ್ನಾಭಿಪ್ರಾಯ ಬದಿಗೊತ್ತಿ ಸಂಘಟಿತರಾಗಿ ಶ್ರಮಿಸಿ

03:16 PM Jan 05, 2018 | Team Udayavani |

ಕೆ.ಆರ್‌.ಪೇಟೆ: ಕಾಂಗ್ರೆಸ್ಸೇ ನಮ್ಮ ಸರ್ವಸ್ವ ಎನ್ನುವ ಧ್ಯೇಯ ಘೋಷಣೆಯಡಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಮುಂದಾಗಬೇಕು ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಕಾರ್ಯಕರ್ತರಿಗೆ ಸಲಹೆ ನೀಡಿದರು.

Advertisement

ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಕಾಂಗ್ರೆಸ್‌ ಸಮಿತಿ ಆಯೋಜಿಸಿದ್ದ ಮುಖಂಡರ ಹಾಗೂ ನೂತನ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಕ್ಷವಿದ್ದರೇ ನಾವು-ನೀವೆಲ್ಲರೂ ಒಂದು ಶಕ್ತಿಯಾಗಿ ಉಳಿಯಲು ಸಾಧ್ಯ.

ಕಾರ್ಯಕರ್ತರು ತಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಅಡಿಯಲ್ಲಿ ಒಂದುಗೂಡಬೇಕು. ಕೆಲವೇ ತಿಂಗಳಿನಲ್ಲಿ ವಿಧಾನಸಭೆಯ ಚುನಾವಣೆ ನಡೆಯಲಿದೆ. ಸಿದ್ದರಾಮಯ್ಯರನ್ನು ಮತ್ತೂಮ್ಮೆ ರಾಜ್ಯದ ಮುಖ್ಯಮಂತ್ರಿಯನ್ನಾಗಿಸುವ ದಿಕ್ಕಿನಲ್ಲಿ ಕಾರ್ಯಕರ್ತರು ಸಕ್ರಿಯರಾಗಿ ಶ್ರಮಿಸಬೇಕು ಎಂದು ಹೇಳಿದರು. 

ಪಕ್ಷ ಸಂಘಟನೆಗೆ ಕೈಜೋಡಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕು. ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರನ್ನು ಪ್ರತಿಷ್ಠಾಪಿಸುವ ಕೆಲಸಕ್ಕೆ ಕಾರ್ಯಕರ್ತರು ಕೈಜೋಡಿಸಿ ದುಡಿಯಬೇಕು. ನೂತನ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಹೋಬಳಿ ಮಟ್ಟದಲ್ಲಿ ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಮತ್ತು ಮಹಿಳಾ ಘಟಕಗಳನ್ನು ಸ್ಥಾಪಿಸಿ ಸಂಘಟನೆಗೆ ಬಲ ತುಂಬುವಂತೆ ಕಿವಿಮಾತು ಹೇಳಿದರು.

ಶಾಸಕರ ವೈಫ‌ಲ್ಯ: ಜಿಪಂ ಸದಸ್ಯ ಕೋಡಿಮಾರನಹಳ್ಳಿ ದೇವರಾಜು ಮಾತನಾಡಿ, ಕ್ಷೇತ್ರದ ಶಾಸಕರಾಗಿ ಕೆ.ಸಿ.ನಾರಾಯಣಗೌಡ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ. ಶಾಸಕರ ಅನುದಾನ ನಿಧಿಯ ಜೊತೆಗೆ ಜಿಪಂ ಮತ್ತು ತಾಪಂ ಅನುದಾನದ ಕಾರ್ಯಗಳಿಗೂ ಗುದ್ದಲಿ ಪೂಜೆ ಮಾಡುವ ಮೂಲಕ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಶಾಸಕರ ಆಡಳಿತ ವೈಫ‌ಲ್ಯವನ್ನು ಕಾರ್ಯಕರ್ತರು ಜನತೆಯ ಮುಂದಿಡಬೇಕೆಂದರು.

Advertisement

ಗುಂಪುಗಾರಿಕೆ ಬೇಡ: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ ಮಾತನಾಡಿ, ಕಾರ್ಯಕರ್ತರ ನಡುವೆ ಗುಂಪುಗಾರಿಕೆ ಸೃಷ್ಟಿಸಿಕೊಳ್ಳದೆ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಚಟುವಟಿಕೆಗಳಲ್ಲಿ, ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. 

ದಲಿತರ ಆಕ್ರೋಶ: ಪಕ್ಷದ ತಾಲೂಕು ದಲಿತ ಮೋರ್ಚಾ ಅಧ್ಯಕ್ಷ ರಾಜಯ್ಯ ಮಾತನಾಡಿ, ಪಕ್ಷದ ವೇದಿಕೆಗಳಲ್ಲಿ ದಲಿತ ಮುಖಂಡರನ್ನು ಕಡೆಗಣಿಸಲಾಗುತ್ತಿದೆ. ದಲಿತರು ಯಾವುದೇ ರಾಜಕೀಯ ಪಕ್ಷದ ಜೀತದಾಳುಗಳಲ್ಲ. ದಲಿತರ ಹೆಗಲ ಮೇಲೆ ಕೈ ಹಾಕಿ ನಡೆಸುವ ಸಂಸ್ಕೃತಿಯನ್ನು ನಾಯಕರು ಬೆಳೆಸಿಕೊಳ್ಳಬೇಕು. ಕ್ಷೇತ್ರದಲ್ಲಿ ದಲಿತ ಮತದಾರರೇ ನಿರ್ಣಾಯಕ.

ದಲಿತರನ್ನು ಕಡೆಗಣಿಸಿದರೆ ಮುಂದಿನ ಚುನಾವಣೆಯಲ್ಲಿ ಆಗುವ ವ್ಯತ್ಯಾಸಕ್ಕೆ ನಮ್ಮನ್ನು ದೂಷಿಸಬೇಡಿ ಎಂದು ಎಚ್ಚರಿಸಿದರು. ಇದೇ ಸಂದರ್ಭದಲ್ಲಿ ಬ್ಲಾಕ್‌ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕಿಕ್ಕೇರಿ ಸುರೇಶ್‌ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕೆ.ಆರ್‌.ರವೀಂದ್ರಬಾಬುರನ್ನು ಅಭಿನಂಧಿಸಲಾಯಿತು.

ಸಭೆಯಲ್ಲಿ ಜಿಪಂ ಮಾಜಿ ಸದಸ್ಯ ಬಿ.ನಾಗೇಂದ್ರಕುಮಾರ್‌, ಪುರಸಭೆ ಮಾಜಿ ಅಧ್ಯಕ್ಷ ಕೆ.ಗೌಸ್‌ಖಾನ್‌, ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷ ವಿ.ಡಿ.ಹರಿಶ್‌, ಟಿಎಪಿಸಿಎಂಎಸ್‌ ಅಧ್ಯಕ್ಷ ಶ್ರೀಧರ್‌, ತಾಪಂ ಸದಸ್ಯರಾದ ಶ್ಯಾಮಣ್ಣ, ಮಾಧವ ಪ್ರಸಾದ್‌, ಮುಖಂಡರಾದ ಎಸ್‌.ಸಿ.ಕಿರಣ್‌ ಕುಮಾರ್‌, ರುಕಾ¾ಂಗದ, ಸುರೇಶ್‌, ಸಣ್ಣನಿಂಗೇಗೌಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next