Advertisement

ಪ್ರತಿ ಬೂತ್‌ಮಟ್ಟದಲ್ಲಿ ಬಿಜೆಪಿ ಸಂಘಟಿಸಿ

01:22 PM May 01, 2022 | Team Udayavani |

ದೇವನಹಳ್ಳಿ: ಕೇಂದ್ರ, ರಾಜ್ಯ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮವನ್ನು ಪ್ರತಿ ವಾರ್ಡ್‌ ಮತ್ತು ಗ್ರಾಮಗಳಲ್ಲಿ ಜನರಿಗೆ ಮನದಟ್ಟು ಮಾಡಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.

Advertisement

ಪಟ್ಟಣದಲ್ಲಿ ತಾಲೂಕು ಮತ್ತು ಟೌನ್‌ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಪಕ್ಷಗಳಿಂದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಮುಂಬರುವ 2023ರ ಸಾರ್ವಜನಿಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ತರಲು ಈಗಿನಿಂದಲೇ ಎಲ್ಲ ಕಾರ್ಯಕರ್ತರು, ಮುಖಂಡರು ಶಕ್ತಿ ಮೀರಿ ಕೆಲಸ ಮಾಡಬೇಕು. ಪ್ರತಿ ಬೂತ್‌ಮಟ್ಟದಲ್ಲಿ ಬಿಜೆಪಿ ಸಂಘಟಿಸಬೇಕು. ಈ ಬಾರಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಇತಿಹಾಸ ಸೃಷ್ಟಿಸಬೇಕು ಎಂದರು.

ವ್ಯಾಪಕ ಪ್ರಚಾರ ನಡೆಸಿ: ಕೇಂದ್ರ, ರಾಜ್ಯ ಸರ್ಕಾರ ಆಯಾ ಕ್ಷೇತ್ರಗಳಲ್ಲಿ ಜಾರಿಗೆ ತಂದಿರುವ ಹಾಗೂ ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡಬೇಕು. ಹೊಸದಾಗಿ ಪಕ್ಷಕ್ಕೆ ಜನ ಸೇರ್ಪಡೆ ಆಗಿರುವುದರಿಂದ ಪಕ್ಷಕ್ಕೆ ಆನೆ ಬಲ ಬಂದಿದೆ. ಕೆಲವರು ತಾಲೂಕಿನಲ್ಲಿ ಬಿಜೆಪಿ ಇಲ್ಲ ಎಂದು ಹೇಳುವವರಿಗೆ ಸರಿಯಾದ ಪಾಠವನ್ನು ಕಲಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಗ್ರಾಪಂಗಳಿಗೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದರು.

ಅಭಿವೃದ್ಧಿ ಕೆಲಸ ಆಗುತ್ತಿಲ್ಲ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಶ್ವಥನಾರಾಯಣ್‌ ಮಾತನಾಡಿ, ನಮ್ಮ ಬಿಜೆಪಿ ಸರ್ಕಾರ ಇರುವುದರಿಂದ ಕೋಟ್ಯಂತರ ರೂ. ಅನುದಾನ ಪುರಸಭೆಗೆ ಬರುತ್ತಿದೆ. ಆದರೆ, ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ನಮ್ಮ ಪಕ್ಷದಿಂದ ಇಬ್ಬರೂ ಗೆದ್ದಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಇದೆ. ಪುರಸಭೆಯಲ್ಲಿ ಒಳಚರಂಡಿ ವ್ಯವಸ್ಥೆ ಆಗಬೇಕಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಹೆಚ್ಚಿನ ಅಭಿವೃದ್ಧಿ ಕೆಲಸಗಳು ಆಗಬೇಕು ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ಸುಂದರೇಶ್‌, ಪ್ರಧಾನ ಕಾರ್ಯದರ್ಶಿ ಮಂಜುನಾಥ್‌, ಜಿಲ್ಲಾ ಮಾಧ್ಯಮ ಪ್ರಮುಖ್‌ ಎಸ್‌. ರಮೇಶ್‌ ಕುಮಾರ್‌, ಪುರಸಭಾ ಸದಸ್ಯ ಬಾಂಬೆ ನಾರಾಯಣಸ್ವಾಮಿ, ತಾಪಂ ಮಾಜಿ ಉಪಾಧ್ಯಕ್ಷ ಎಸ್‌.ಎಂ. ನಾರಾಯಣಸ್ವಾಮಿ, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಸುಬ್ಬೇಗೌಡ, ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್‌ ಬಾಬು, ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಮಂಜುನಾಥ್‌, ರಾಜ್ಯ ಪರಿಷತ್‌ ಸದಸ್ಯ ದೇಸು ನಾಗರಾಜ್‌, ಟೌನ್‌ ಬಿಜೆಪಿ ಅಧ್ಯಕ್ಷ ಸಂದೀಪ್‌, ಮುಖಂಡ ವೈ.ಕೆ. ಚಂದ್ರಶೇಖರ್‌, ಹರೀಶ್‌, ತರಕಾರಿ ನಾಗರಾಜ್‌, ಮುರಳಿ, ಉಮೇಶ್‌, ಆಶಾರಾಣಿ, ಅಮರನಾರಾಯಣ್‌, ಲಕ್ಷ್ಮೀಗೋಪಿ, ಕೊತ್ತಂಬರಿ ಮಂಜುನಾಥ್‌, ಸುರೇಶ್‌ ಆಚಾರ್‌, ಡಿ.ಸಿ.ಅಂಬರೀಶ್‌ ಹಾಗೂ ಮತ್ತಿತರರು ಇದ್ದರು.

Advertisement

ಹೊರಗಿನಿಂದ ಬರುವ ಅಭ್ಯರ್ಥಿಗೆ ತಕ್ಕ ಪಾಠ ಕಲಿಸಿ : ತಾಲೂಕಿನಲ್ಲಿ ಎರಡು ಬಾರಿ ಶಾಸಕರಾಗಿ ಉತ್ತಮ ಕೆಲಸ ಮಾಡಲಾಗಿದೆ. ಕಾರ್ಯಕರ್ತರ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಲಾಗುವುದು. ಹೊರಗಿನಿಂದ ಬರುವ ಅಭ್ಯರ್ಥಿಗಳಿಗೆ ತಕ್ಕ ಪಾಠವನ್ನು ಕಲಿಸಬೇಕು. ಸ್ಥಳೀಯ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು. ಎಲ್ಲಿಂದಲೋ ಬಂದವರನ್ನು ಗೆಲ್ಲಿಸಿದರೆ ಕ್ಷೇತ್ರ ಅಭಿವೃದ್ಧಿ ಆಗುವುದಿಲ್ಲ ಎಂದು ಮಾಜಿ ಶಾಸಕ ಜಿ. ಚಂದ್ರಣ್ಣ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next