Advertisement
ಸ್ವಾಭಿಮಾನಿ ವರ್ಸಸ್ ಮೂಲ ಕಾಂಗ್ರೆಸ್ಸಿಗರ ಫೈಟ್ ತೀವ್ರವಾಗಿದ್ದು, ಮುಂದಿನ ವಿಧಾನಸಭಾ ಚುನಾವಣಾ ವೇಳೆ ಹೊಸ ಸ್ವರೂಪ ಪಡೆದುಕೊಳ್ಳುವುದು ಖಚಿತವಾಗಿದೆ.
Related Articles
Advertisement
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರ ಶರತ್ ಪಕ್ಷೇತರರಾಗಿ ಸ್ವಾಭಿಮಾನದ ಹೆಸರಿನಲ್ಲಿ ಕಣಕ್ಕಿಳಿದು ಗೆಲುವು ದಕ್ಕಿಸಿಕೊಂಡಿದ್ದರು. ಆ ಬಳಿಕ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂಟಿಬಿ ನಾಗರಾಜ್ ವಿರುದ್ಧ ಸೋಲು ಅನುಭವಿಸಿದ್ದ ಅವರು,ಒಂದೂವರೆ ವರ್ಷದ ನಂತರ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಾಗರಾಜ್ ಅವರನ್ನು ಸೋಲಿಸಿ ಸೇಡು ತೀರಿಸಿಕೊಂಡಿದ್ದರು.