Advertisement
ನ. 1ರಿಂದ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಈ ಹೊಸ ಬದಲಾವಣೆ ಜಾರಿಗೆ ಬರಲಿದೆ. ಸಿಲಿಂಡರ್ ಹಸ್ತಾಂತರವಾಗಬೇಕಾದರೆ ಒಟಿಪಿ ನೀಡುವುದು ಕಡ್ಡಾಯ. ಅಡುಗೆ ಅನಿಲ ಕಳ್ಳತನ ತಪ್ಪಿಸುವ ಮತ್ತು ಸರಿಯಾದ ಗ್ರಾಹಕನನ್ನು ಗುರುತಿಸುವ ಉದ್ದೇಶದಿಂದ ತೈಲ ಕಂಪೆನಿಗಳು “ಪೂರೈಕೆ ದೃಢೀಕರಣ ಕೋಡ್’ (ಡಿಎಸಿ) ಎಂಬ ಹೊಸ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿವೆ. ಇದು ಮೊದಲಿಗೆ 100 ಸ್ಮಾರ್ಟ್ ಸಿಟಿಗಳಲ್ಲಿ ಅನುಷ್ಠಾನಗೊಳ್ಳುತ್ತದೆ.
ಸಿಲಿಂಡರ್‌ಗೆ ಬುಕಿಂಗ್ ಬಳಿಕ ಗ್ರಾಹಕನ ನೋಂದಾಯಿತ ಮೊಬೈಲ್‌ಗೆ ಒಟಿಪಿ ರವಾನಿಸಲಾಗುತ್ತದೆ. ಸಿಲಿಂಡರ್ ತರುವ ವ್ಯಕ್ತಿಗೆ ಈ ಒಟಿಪಿ ಸಂಖ್ಯೆ ನೀಡಬೇಕು. ವಾಣಿಜ್ಯ ಸಿಲಿಂಡರ್‌ಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ.