Advertisement

ಇಂದಿರಾ ಕ್ಯಾಂಟೀನ್‌ಗೆ ಮೊದಲೇ “ನಮ್ಮ ಅಪ್ಪಾಜಿ’ಕ್ಯಾಂಟೀನ್‌

11:55 AM Jul 18, 2017 | Team Udayavani |

ಬೆಂಗಳೂರು: ಬಿಬಿಎಂಪಿಯ ಇಂದಿರಾ ಕ್ಯಾಂಟೀನ್‌ ಸ್ಥಳ ಗುರುತಿಸಲು ಪಾಲಿಕೆ ಹರಸಾಹಸ ಪಡುತ್ತಿರುವ ನಡುವೆಯೇ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಅವರ ನೇತೃತ್ವದಲ್ಲಿ “ನಮ್ಮ ಅಪ್ಪಾಜಿ’ ಕ್ಯಾಂಟೀನ್‌ ಪ್ರಾರಂಭವಾಗಲಿದೆ.

Advertisement

ಆಗಸ್ಟ್‌ 26 ಅಥವಾ 28ರಂದು ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಮೊದಲ “ನಮ್ಮ ಅಪ್ಪಾಜಿ’ ಕ್ಯಾಂಟೀನ್‌ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಆ ನಂತರ ನಗರದ ಇತರೆಡೆಯೂ ಕ್ಯಾಂಟೀನ್‌ಗಳನ್ನು ತೆರೆಯಲಾಗುತ್ತದೆ.

ನಮ್ಮ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಐದು ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್‌, ಕೇಸರಿಬಾತ್‌, ಹತ್ತು ರೂ.ಗೆ ಪೊಂಗಲ್‌, ಮುದ್ದೆ ಬಸ್ಸಾರು, ಅನ್ನ ಸಾಂಬಾರ್‌, ರೈಸ್‌ ಬಾತ್‌, 3 ರೂ.ಗೆ ಕಾಫಿ-ಟೀ ನೀಡಲಾಗುವುದು ಎಂದು ವಿಧಾನಪರಿಷತ್‌ ಸದಸ್ಯ ಟಿ.ಎ.ಶವರಣ ಹೇಳಿದ್ದಾರೆ.

ಶಿರಡಿ ಸಾಯಿಬಾಬಾ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಚಿತ್ರವುಳ್ಳ ಕ್ಯಾಂಟೀನ್‌ನ ಲಾಂಛನ ಸಿದ್ಧಗೊಂಡಿದೆ. ಗುಣಮಟ್ಟ ಹಾಗೂ ಸ್ವತ್ಛತೆಗೆ ಹೆಚ್ಚು ಒತ್ತು ನೀಡಲಾಗುವುದು. ಪರಿಣಿತರ ತಂಡವನ್ನು ಇದಕ್ಕಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next