Advertisement
ಸೆ. 18ರಂದು ಕುರ್ಲಾ ಪೂರ್ವದ ಬಂಟರ ಭವನದ ಎಸ್‌ಎಂಎಸ್ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿ ವತಿಯಿಂದ ನಡೆದ “ಬರವುದ ತೇರ್’ ಎನ್ನುವ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಮಕ್ಕಳ ಛದ್ಮವೇಷ ಸ್ಪರ್ಧೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳ ಕಾರ್ಯ ಅಭಿನಂದನೀಯವಾಗಿದೆ. ನಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಬೇಕು. ಸಂಘದ ಧ್ಯೇಯವೂ ಇದೇ ಆಗಿದೆ. ಮಕ್ಕಳ ಪ್ರತಿಭೆಯನ್ನು ಎಳವೆಯಿಂದಲೇ ಪ್ರೋತ್ಸಾಹಿಸಿದಾಗ ಅವರು ಆಯಾಯ ಕ್ಷೇತ್ರಗಳಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿ ಶುಭ ಹಾರೈಸಿದರು.
Related Articles
Advertisement
ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದ ರ್ಭ ದಲ್ಲಿ ಮಕ್ಕಳಿಗಾಗಿ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಧನುಷ್ ಆರ್. ಶೆಟ್ಟಿ ಪ್ರಥಮ, ಆಯುಷಿ ಅಜಯ್ ಶೆಟ್ಟಿ ದ್ವಿತೀಯ ಮತ್ತು ವ್ರತಿಕಾ ಡಿ. ಶೆಟ್ಟಿ ಮತ್ತು ಗ್ಯಾತಾ ಪಿ. ಶೆಟ್ಟಿ ತೃತೀಯ ಬಹುಮಾನ ಪಡೆದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಮಕ್ಕಳಿಗೆ ಸಮಾಧಾನಕರ ಬಹುಮಾನಗಳನ್ನು ವಿತರಿ ಸಲಾಯಿತು. ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಇತ್ತೀಚೆಗೆ ಆಯೋಜಿಸಿದ ನಾಟ್ಯ ಸುಧಾ ಸೂಪರ್ ಮೊಮ್ಸ್ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಶೈಕ್ಷಣಿಕ ನೆರವನ್ನು ನೀಡಿದಂತಹ ದಾನಿಗಳನ್ನು ಗೌರವಿಸಲಾಯಿತು. ಸುಮಾರು 30 ಮಕ್ಕಳನ್ನು ಶೈಕ್ಷಣಿಕ ನೆರವಿನಡಿಯಲ್ಲಿ ದತ್ತು ಸ್ವೀಕರಿಸಿ ಚೆಕ್ಕನ್ನು ವಿತರಿಸಲಾಯಿತು.
ಬಂಟರ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್‌ದಾಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ದಿವಾಕರ್ ಶೆಟ್ಟಿ ಇಂದ್ರಾಳಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ ಹಾಗೂ ಕುರ್ಲಾ ಭಾಂಡುಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಗೀತಾ ಸಿ. ಶೆಟ್ಟಿ, ಯುವ ವಿಭಾಗದ ಕಾರ್ಯಧ್ಯಕ್ಷ ವಿಕಾಸ್ ರೈ ಉಪಸ್ಥಿತರಿದ್ದರು. ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಯುವ ವಿಭಾಗದ ಪದಾಧಿಕಾರಿಗಳು, ಸಂಘದ ಎಲ್ಲ ಉಪಸಮಿತಿಗಳ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಕುರ್ಲಾ – ಭಾಂಡುಪ್ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಯುವ ವಿಭಾಗದ ಪದಾಧಿಕಾರಿಗಳು ಭಾಗವಹಿಸಿದ್ದರು.
ಮಹಿಳಾ ವಿಭಾಗದ ಕೋಶಾಧಿಕಾರಿ ಸರೋಜಿನಿ ಎಸ್. ಶೆಟ್ಟಿ ದೇವರ ಸ್ತುತಿಗೈದರು. ಮುಖ್ಯ ಅತಿಥಿ ಪರಿಚಯ ಮತ್ತು ನಿರ್ಣಾಯಕರಾಗಿ ಭಾಗವಹಿಸಿದ ಸತ್ಯಾ ಪಿ. ಶೆಟ್ಟಿ ಮತ್ತು ರೇಶ್ಮಾ ಹರೀಶ್ ಶೆಟ್ಟಿ ಅವ ರನ್ನು ಸಮಿತಿಯ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ನಂದಳಿಕೆ ನಾರಾಯಣ ಶೆಟ್ಟಿ, ಮಹಿಳಾ ವಿಭಾಗದ ಸಾಂಸ್ಕೃತಿಕ ವಿಭಾಗದ ಕಾರ್ಯಧ್ಯಕ್ಷೆ ವಿನುತಾ ಶೆಟ್ಟಿ, ಕೋಶಾಧಿಕಾರಿ ಮಲ್ಲಿಕಾ ಶೆಟ್ಟಿಯವರು ಕ್ರಮ ವಾಗಿ ಪರಿಚಯಿಸಿದರು. ಪ್ರಾದೇಶಿಕ ಸಮಿತಿಯ ಉಪಾಧ್ಯಕ್ಷ ಗಿರೀಶ್ ಶೆಟ್ಟಿ ವಂದಿಸಿದರು. ಸಂಪೂರ್ಣ ಕಾರ್ಯ ಕ್ರಮವನ್ನು ಮಹಿಳಾ ವಿಭಾಗದ ಉಪಾಧ್ಯಕ್ಷೆ ಅಮೃತಾ ಶೆಟ್ಟಿ ನಿರ್ವಹಿಸಿದರು.
ಮಕ್ಕಳ ಸಮಗ್ರ ಬೆಳವಣಿಗೆಮಕ್ಕಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಬರವುದ ತೇರ್ ಎಂಬ ವಿನೂತನ ರೀತಿಯ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಮಕ್ಕಳ ಶಿಕ್ಷಣದೊಂದಿಗೆ ಅವರ ಸಮಗ್ರ ಬೆಳವಣಿಗೆಗೆ ಪೂರಕವಾಗಿರುವ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ನಡೆಸಲಾಗುವುದು. ನಮ್ಮ ಈ ಕಾರ್ಯಕ್ರಮಕ್ಕೆ ಸಹಕರಿಸಿ ಪ್ರೋತ್ಸಾಹ ನೀಡಿದ ಎಲ್ಲರಿಗೂ ಕೃತಜ್ಞತೆಗಳು. ಮಕ್ಕಳನ್ನು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಮಹಿಳೆಯರು ಪ್ರೋತ್ಸಾಹಿಸಬೇಕು. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ಮತ್ತು ವೇದಿಕೆ ಕಲ್ಪಿಸುವುದು ನಮ್ಮ ಗುರಿಯಾಗಿದೆ. ಇದರಿಂದ ಮಕ್ಕಳ ಸಮಗ್ರ ಬೆಳವಣಿಗೆ ಸಾಧ್ಯವಾಗುತ್ತದೆ. ಸಮಿತಿಯ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ.
-ಹರೀಶ್ ಶೆಟ್ಟಿ, ಕಾರ್ಯಾಧ್ಯಕ್ಷರು, ಬಂಟರ ಸಂಘ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿ ಪದಾಧಿಕಾರಿಗಳ
ಕೆಲಸ ಶ್ಲಾಘನೀಯ
ವಿದ್ಯೆ ಮನುಷ್ಯನ ಸಮಗ್ರ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಬೆಳೆಸುತ್ತಿರುವ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳ ಕೆಲಸ ಶ್ಲಾಘನೀಯ. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬ ಕನ್ನಡದ ನುಡಿಯಂತೆ ಸಮಾಜದ ದಾನಿಗಳಿಂದ ಇಂದು ನೂರಾರು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇದು ಹೆಮ್ಮೆ ಪಡುವ ವಿಷಯವಾಗಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ಇಂತಹ ಕೆಲಸವನ್ನು ಪ್ರತೀ ಪ್ರಾದೇಶಿಕ ಸಮಿತಿಗಳು ನಡೆಸಬೇಕು.
-ಪ್ರವೀಣ್ ಭೋಜ ಶೆಟ್ಟಿ, ಸಮನ್ವಯಕರು, ಬಂಟರ ಸಂಘ ಉನ್ನತ ಶಿಕ್ಷಣ ಮತ್ತು ವೃತ್ತಿಪರ ಸ್ಕಾಲರ್‌ಶಿಪ್ ನಿಧಿ ಸಮಿತಿ