Advertisement

ಯುವಕರ ಸ್ವಾವಲಂಬನೆಯೇ ನಮ್ಮ ಗುರಿ: ಸೊರಕೆ 

07:20 AM Apr 12, 2018 | Team Udayavani |

ಕಾಪು: ಯುವ ಶಕ್ತಿ ರಾಷ್ಟ್ರದ ಶಕ್ತಿ. ದೇಶದ ಅಭಿವೃದ್ಧಿಗೆ ಯುವಶಕ್ತಿಯ ಅಭಿವೃದ್ಧಿ ಅಗತ್ಯ. ಕ್ಷೇತ್ರದ ಯುವಜನರಲ್ಲಿ ಚೈತನ್ಯ ತುಂಬಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಕೆಲಸ ನಮ್ಮಿಂದ ನಡೆಯಬೇಕಿದೆ ಎಂದು ಕಾಪು ಶಾಸಕ ವಿನಯಕುಮಾರ್‌ ಸೊರಕೆ ಹೇಳಿದರು.

Advertisement

ಅವರು ಕಾಪು ರಾಜೀವ ಭವನದಲ್ಲಿ ಮಂಗಳವಾರ ನಡೆದ ಕಾಪು ಬ್ಲಾಕ್‌ ಕಾಂಗ್ರೆಸ್‌ ದಕ್ಷಿಣ ವಿಭಾಗದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡುತ್ತಿದ್ದರು. ಯುವಕರಲ್ಲಿ ಸಾಮರ್ಥ್ಯ ಅರಿತುಕೊಂಡು ಅವರನ್ನು ಸಧೃಢಗೊಳಿಸಲು ಯುವ ಕಾಂಗ್ರೆಸ್‌ ಮೂಲಕವಾಗಿಯೂ ಪ್ರಯತ್ನಿಸಲಾಗುತ್ತಿದೆ ಎಂದರು.ಈ ಸಂದರ್ಭ ಗ್ರಾಮೀಣ ಯುವ ಕಾಂಗ್ರೆಸ್‌ ಪದಾಧಿಕಾರಿಗಳ ನೇಮಕಾತಿ ಪತ್ರವನ್ನು ವಿತರಿಸಲಾಯಿತು

ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಡಾ| ದೇವಿಪ್ರಸಾದ್‌ ಶೆಟ್ಟಿ, ಡಿಸಿಸಿ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಕಾಪು ಬ್ಲಾಕ್‌ ಉಸ್ತುವಾರಿ ಅಶೋಕ್‌ ಕುಮಾರ್‌ ಕೊಡವೂರು, ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್‌ ಕೋಟ್ಯಾನ್‌, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪ್ರಭಾವತಿ ಸಾಲ್ಯಾನ್‌, ಯುವ ಕಾಂಗ್ರೆಸ್‌ ರಾಜ್ಯ ಕಾರ್ಯದರ್ಶಿ ಅಬ್ದುಲ್‌ ಅಜೀಜ್‌,  ಪಕ್ಷದ ಮುಖಂಡರಾದ ಫರ್ಜಾನ, ಕಿಶೋರ್‌ ಕುಮಾರ್‌, ದೀಪಕ್‌ ಕುಮಾರ್‌ ಎರ್ಮಾಳ್‌, ಯುವ ಕಾಂಗ್ರೆಸ್‌ ಪದಾಧಿಕಾರಿಗಳಾದ ಅಬ್ದುಲ್‌ ಅಜೀಜ್‌, ನವೀನ್‌ ಶೆಟ್ಟಿ, ನಿಯಾಜ್‌, ಇಮ್ರಾನ್‌, ಪ್ರಭಾಕರ ಆಚಾರ್ಯ ಉಪಸ್ಥಿತರಿದ್ದರು. ಕಾಪು ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಮೆಲ್ವಿನ್‌ ಡಿ.ಸೋಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next