Advertisement

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

03:36 PM Sep 24, 2023 | Team Udayavani |

ಹೊಸದಿಲ್ಲಿ: ಈ ಹಿಂದೆ ಭಾರತೀಯ ರೈಲ್ವೇ ಆಧುನೀಕರಣಕ್ಕೆ ಹೆಚ್ಚಿನ ಗಮನ ನೀಡದಿರುವುದು ದುರದೃಷ್ಟಕರ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಅದರ ಪರಿವರ್ತನೆಗಾಗಿ ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದರು.

Advertisement

11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುವ ಮೊದಲು ಪ್ರಧಾನಿ ಮೋದಿ ಈ ಮಾತುಗಳನ್ನಾಡಿದರು.

ಒಟ್ಟು ಒಂಬತ್ತು ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ರಾಜ್ಯಗಳಲ್ಲಿ ವೇಗದ ಸಂಪರ್ಕವನ್ನು ಒದಗಿಸುತ್ತವೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದ ಪ್ರಧಾನಿ ಮೋದಿ, ಮೂಲಸೌಕರ್ಯ ಅಭಿವೃದ್ಧಿಯ ವೇಗ ಮತ್ತು ಪ್ರಮಾಣವು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಹೊಂದಿಕೆಯಾಗುತ್ತಿದೆ ಎಂದು ಹೇಳಿದರು.

ವಂದೇ ಭಾರತ್ ರೈಲುಗಳ ಜನಪ್ರಿಯತೆ ನಿರಂತರವಾಗಿ ಹೆಚ್ಚುತ್ತಿದೆ. ಈಗಾಗಲೇ 1,11,00,000 ಪ್ರಯಾಣಿಕರು ಅದರಲ್ಲಿ ಪ್ರಯಾಣಿಸಿದ್ದಾರೆ. ಈಗಾಗಲೇ 25 ವಂದೇ ಭಾರತ್ ರೈಲುಗಳು ಓಡುತ್ತಿವೆ ಮತ್ತು ಈಗ ಒಂಬತ್ತು ರೈಲುಗಳನ್ನು ಸೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

Advertisement

ಇದನ್ನೂ ಓದಿ:Quick 5 with Nidhi Subbaiah; ಸಿನಿಮಾ ಬಿಟ್ಟು ಎಲ್ಲೂ ಹೊರಗೆ ಹೋಗಿರಲಿಲ್ಲ..

ಈ ರೈಲುಗಳು ದೇಶದ ಎಲ್ಲಾ ಭಾಗಗಳಿಗೆ ಸಂಪರ್ಕ ಕಲ್ಪಿಸುವ ದಿನ ದೂರವಿಲ್ಲ ಎಂದರು.

“ಭಾರತದ ಬಡ ಮತ್ತು ಮಧ್ಯಮ ವರ್ಗದ ಜನರ ಅತ್ಯಂತ ವಿಶ್ವಾಸಾರ್ಹ ಸಹ-ಪ್ರಯಾಣಿಕ ಭಾರತೀಯ ರೈಲ್ವೆಯಾಗಿದೆ. ಒಂದೇ ದಿನದಲ್ಲಿ ರೈಲ್ವೆಯಲ್ಲಿ ಪ್ರಯಾಣಿಸುವವರ ಸಂಖ್ಯೆ ಅನೇಕ ದೇಶಗಳ ಜನಸಂಖ್ಯೆಗಿಂತ ಹೆಚ್ಚು” ಎಂದು ಅವರು ಹೇಳಿದರು.

“ಭಾರತೀಯ ರೈಲ್ವೇಯನ್ನು ಆಧುನೀಕರಿಸಲು ಹೆಚ್ಚಿನ ಗಮನ ನೀಡದಿರುವುದು ದುರದೃಷ್ಟಕರವಾಗಿದೆ. ಆದರೆ ಈಗ ನಮ್ಮ ಸರ್ಕಾರವು ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ಕೆಲಸ ಮಾಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next